ವಿಜಯಪುರ: ಕೀಲಿ ಹಾಕಿದ ಮನೆಗಳ ಕಳ್ಳತನ ಕೃತ್ಯಗಳನ್ನು ಸಮರ್ಥವಾಗಿ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (LHBS) ಎನ್ನುವ ಉಪಕ್ರಮವನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮನೆ ಕಳ್ಳತನ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಈಗಾಗಲೇ ಹಲವು ರೀತಿಯ ಕ್ರಮಗಳನ್ನು ಕೈಕೊಳ್ಳುತ್ತಾ ಬಂದಿದ್ದು, ಇದೀಗ ಹೊಸದಾಗಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ ತರಲಾಗುತ್ತಿದೆ ಎಂದರು.

ಸಾರ್ವಜನಿಕರು ತಮ್ಮ ಮನೆಗೆ ಕೀಲಿ ಹಾಕಿಕೊಂಡು ಹೋದ ಸಂದರ್ಭದಲ್ಲಿ ಕಳ್ಳರು ಅಂತಹ ಮನೆಗಳನ್ನು ಗುರುತಿಸಿ ಕಳವು ಮಾಡುವುದನ್ನು ಗಮನಿಸಿದ್ದೇವೆ. ಈ ಸಂಬಂಧ ಪೊಲೀಸ್ ಇಲಾಖೆಯು ಮನೆಯಲ್ಲಿ ಕಳ್ಳತನದಂತಹ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಮನೆಗಳಿಗೆ ಕೀಲಿ ಹಾಕಿಕೊಂಡು ಹೋಗುವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಮೊಬೈಲ್ ನಂ.8277970747ಕ್ಕೆ ತಮ್ಮ ಹೆಸರು (Name), ಮನೆಯ ವಿಳಾಸ (Address), ಮನೆಯ ಜಿಪಿಎಸ್ ವಿವರ (G.P.S Location), ಮನೆಯ ಪೋಟೋ (House Photo), ಮನೆಯಿಂದ ಹೊರ ಹೋಗುವ ಒಟ್ಟು ಅವಧಿ(Number of Days) ಒಳಗೊಂಡ ಮಾಹಿತಿಯನ್ನು ಇಲಾಖೆಯೊಂದಿಗೆ ವಿನಿಯಮ ಮಾಡಿಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕರು ನೀಡಿದ ವಿವರವನ್ನು ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಮೊಬೈಲ್ ನಂ. 8277970747 ಮುಖಾಂತರ ಪಡೆದುಕೊಂಡು ಸಂಬಂಧಪಟ್ಟ ಠಾಣೆಗೆ ಮಾಹಿತಿ ರವಾನಿಸಿ, ಬೀಟ್ ಸಿಬ್ಬಂದಿ ಮೂಲಕ ಮಾಹಿತಿ ನೀಡಿದ ಮನೆಗಳಿಗೆ ಭೇಟಿ ನೀಡಿ ನಿಗಾ ಇರಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ಹಂಚಿಕೊಂಡ ಮಾಹಿತಿಯ ವಿವರದ ಗೌಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-131924427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.