ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ -ಮಂಗಳೂರು ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ: ನೈರುತ್ಯ ರೈಲ್ವೆ

Published 26 ಮಾರ್ಚ್ 2024, 15:19 IST
Last Updated 26 ಮಾರ್ಚ್ 2024, 15:19 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲಿನ (07377/07378) ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸೇವೆಯನ್ನು ಮುಂದುವರಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. 

ವಿಜಯಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು(07377)ಸೇವೆಯನ್ನು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಮಾರ್ಚ್‌ 31 ರವರೆಗೆ ಸೂಚಿಸಲಾಗಿತ್ತು.

ಮಂಗಳೂರು ಜಂಕ್ಷನ್- ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು(07378) ಸೇವೆಯನ್ನು ಏಪ್ರಿಲ್ 2 ರಿಂದ ಅಕ್ಟೋಬರ್ 1 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಏಪ್ರಿಲ್ 1, 2024 ರವರೆಗೆ ಸೂಚಿಸಲಾಗಿತ್ತು.

ವಿಜಯಪುರ - ಮಂಗಳೂರು ಜಂಕ್ಷನ್ - ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ (07377/07378) ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ ನಂತರ, ಗುಂತಕಲ್-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ಮತ್ತು ಕಬಕ –ಪುತ್ತೂರು- ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ವೇಳಾಪಟ್ಟಿಯನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ, ಈ ಕೆಳಗಿನ ಲಿಂಕ್ https://swr.indianrailways.gov.in/view_detail.jsp?lang=0&dcd=7330&id=0,4,268  ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು.

ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ, ಸಹಾಯವಾಣಿ ಸಂಖ್ಯೆ 139 ಗೆ ಸಂಪರ್ಕಿಸಿ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT