ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ ಗಳನ್ನು ಸಿದ್ಧವಾಗಿಡಬೇಕು. ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು’ ಎಂದು ಸೂಚಿಸಿದರು.

‘ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ’ ಎಂದು ಸೂಚಿಸಿದರು.

‘ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಬೇಕು’ ಎಂದು ಮೇಯರ್ ಮನವಿ ಮಾಡಲಾಯಿತು.

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-680200167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.