ವಿಜಯಪುರ: ಅಪ್ರಾಪ್ತ ವಯಸ್ಸಿನ ಬಾಲಕರು ದ್ವಿಚಕ್ರ ವಾಹನ ಚಲಾಯಿಸಿದ ಮೂರು ಪ್ರಕರಣಗಳಲ್ಲಿ ಅವರ ಪೋಷಕರಿಗೆ ತಲಾ ₹25 ಸಾವಿರ ದಂಡ ಹಾಗೂ ಒಂದು ವರ್ಷ ವಾಹನದ ನೋಂದಣಿ ರದ್ದುಪಡಿಸಿ ವಿಜಯಪುರ ಜೆಎಂಎಫ್ ನ್ಯಾಯಾಲಯ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಮೇ 7ರಂದು ನಗರದ ವಾಜಪೇಯಿ ರಸ್ತೆ, ಬಿಎಲ್ಡಿಇ ರಸ್ತೆ ಮತ್ತು ಲಿಂಗದಗುಡಿ ರಸ್ತೆ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಸಂಚಾರಿ ಠಾಣೆ ಪೊಲೀಸರು ಮೂವರು ಅಪ್ರಾಪ್ತ ಬಾಲಕರು ದ್ವಿಚಕ್ರ ವಾಹನಗಳನ್ನು ಚಲಾಯಿಸುತ್ತಿರುವುದನ್ನು ಪತ್ತೆ ಹಚ್ಚಿದರು. ಪೋಷಕರ ವಿರುದ್ಧ ಪ್ರತ್ಯೇಕವಾಗಿ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಈ ದೂರಿನನ್ವಯ ಕೋರ್ಟ್ ದಂಡ ವಿಧಿಸಿ, ವಾಹನದ ನೋಂದಣಿ ರದ್ದುಗೊಳಿಸಿದೆ. ಅಲ್ಲದೇ, ಈ ಬಾಲಕರಿಗೆ 25 ವರ್ಷ ವಯಸ್ಸು ಪೂರ್ಣಗೊಳ್ಳುವವರೆಗೆ ಚಾಲನಾ ಪರವಾನಿಗೆ ನೀಡಬಾರದು ಎಂದು ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-1735517541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.