ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸೇರಲು ಜಿಲ್ಲೆಯ ನಾಲ್ವರು ಶಾಸಕರು ತೀವ್ರ ಲಾಬಿ ನಡೆಸಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಎಂ.ಬಿ.ಪಾಟೀಲ ಹಾಗೂ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದ ಶಿವಾನಂದ ಪಾಟೀಲರು ಡಿಕೆಶಿ ಸಚಿವ ಸಂಪುಟದಲ್ಲೂ ಸ್ಥಾನ ಗಿಟ್ಟಿಸಲು ಕಸರತ್ತು ನಡೆಸಿದ್ದಾರೆ.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರು ಹೊಸದಾಗಿ ಸಚಿವರಾಗುವ ನಿರೀಕ್ಷೆಯಲ್ಲಿದ್ದು, ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಅಲ್ಲದೇ, ಪ್ರಥಮ ಬಾರಿಗೆ ಶಾಸಕರಾದವರಿಗೂ ಅವಕಾಶ ನೀಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ನಾಗಠಾಣ ಶಾಸಕ ವಿಠಲ ಕಟಕಧೋಂಡ ಹಕ್ಕೊತ್ತಾಯ ಮಂಡಿಸಿದ್ದಾರೆ.

ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಮತ್ತು ಸಿ.ಎಸ್.ನಾಡಗೌಡ ಅವರು ಈಗಾಗಲೇ ಒಂದೆರಡು ಬಾರಿ ಸಚಿವರಾಗುವ ಅವಕಾಶ ಲಭಿಸಿದೆ. ಆದರೆ, ಇಂಡಿ ಶಾಸಕ ಯಶವಂತರಾಯರು ಮೂರು ಬಾರಿ ಶಾಸಕರಾದರೂ ಒಮ್ಮೆಯೂ ಸಚಿವರಾಗುವ ಅವಕಾಶ ಲಭಿಸಿಲ್ಲ. ಅಲ್ಲದೇ, ಇಂಡಿ ಕ್ಷೇತ್ರದ ಯಾರೊಬ್ಬರಿಗೂ ಇದುವರೆಗೂ ಅವಕಾಶ ಲಭಿಸಿಲ್ಲ. ಈ ಕಾರಣಕ್ಕೆ ಯಶವಂತರಾಯರಿಗೆ ಈ ಬಾರಿ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೇ, 2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರು ಮುಂದಿನ ಸಚಿವ ಸಂಪುಟದಲ್ಲಿ ಯಶವಂತರಾಯರಿಗೆ ಅವಕಾಶ ನೀಡುವ ಭರವಸೆ ನೀಡಿದ್ದರು. ಅದು ಈಗ ಈಡೇರುವ ಸಾಧ್ಯತೆ ಇದೆ ಎಂಬ ಮಾತು ದಟ್ಟವಾಗಿದೆ.

‘ಸಿದ್ದರಾಮಯ್ಯ ಸಂಪುಟದಲ್ಲಿ ಇದ್ದವರಿಗೆ ಅವಕಾಶವಿಲ್ಲ, ಹೊಸಬರಿಗೆ ಮಾತ್ರ ಅವಕಾಶ’ ಎಂಬ ಸೂತ್ರ ಒಂದು ವೇಳೆ ಜಾರಿಗೆ ಬಂದರೆ ಯಶವಂತರಾಯಗೌಡ ಪಾಟೀಲ ಮತ್ತು ಸಿ.ಎಸ್.ನಾಡಗೌಡ ಅವರಿಗೆ ಅದೃಷ್ಟ ಒಲಿದು ಬರಲಿದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಉಳಿಸಿಕೊಂಡು, ಇನ್ನೊಬ್ಬರನ್ನು ಕೈಬಿಟ್ಟು ಅವರ ಬದಲಿಗೆ ಹೊಸಬರಿಗೆ ಅವಕಾಶ ಲಭಿಸುವ ಸಾಧ್ಯತೆಯೂ ದಟ್ಟವಾಗಿದೆ. ಹೀಗೊಂದು ವೇಳೆ ನಡೆದರೆ ಹಾಲಿ ಸಚಿವರಾಗಿದ್ದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರಿಬ್ಬರಲ್ಲಿ ಯಾರು ಡಿಕೆ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲಿದ್ದಾರೆ ಹಾಗೂ ಯಶವಂತರಾಯಗೌಡ ಮತ್ತು ಸಿ.ಎಸ್.ನಾಡಗೌಡ ಅವರಲ್ಲಿ ಯಾರಿಗೆ ಸಚಿವರಾಗುವ ಅವಕಾಶ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯದ ವಿವಿಧ ಜಿಲ್ಲಾವಾರು, ಜಾತಿವಾರು ಸಚಿವ ಸ್ಥಾನ ಮೀಸಲು ನೀಡುವುದರಿಂದ ವಿಜಯಪುರ ಜಿಲ್ಲೆಯ ನಾಲ್ವರಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಒಲಿಯಲಿದೆ ಎಂಬುದು ಕಾದುನೋಡಬೇಕಿದೆ.

ಎಂಬಿಗೆ ಡಿಸಿಎಂ ಸ್ಥಾನ?

ನೂತನ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾದರೆ ಅದರಲ್ಲಿ ರಾಜ್ಯದ ಪ್ರಬಲ ಲಿಂಗಾಯತ ಸಮುದಾಯಕ್ಕೆ ಅವಕಾಶ ಒಲಿಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಹಾಗೊಂದು ವೇಳೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಲಿಂಗಾಯತ ಸಮುದಾಯಕ್ಕೆ ನೀಡುವ ವಿಚಾರ ಬಂದರೆ ಎಂ.ಬಿ.ಪಾಟೀಲಗೆ ಲಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರ ಹೊರತಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಎಂ.ಬಿ.ಪಾಟೀಲ ಹೆಸರು ಮುಂಚೂಣಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.