ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಸುನೀಲ್ ಗೌಡ ಪಾಟೀಲ

Last Updated 14 ಡಿಸೆಂಬರ್ 2021, 8:53 IST
ಅಕ್ಷರ ಗಾತ್ರ

ವಿಜಯಪುರ: ಇವತ್ತಿನ ನನ್ನ ಗೆಲುವು ಅವಳಿ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ನಾಯಕರು, ಹಾಲಿ ಮಾಜಿ ಶಾಸಕರು, ಮಾಜಿ ಸಚಿವರ ಗೆಲುವಾಗಿದೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಧ್ವನಿಯಾಗಿ ಕೆಲಸ ಮಾಡುವೆ ಎಂದರು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಗೌರವಧನ ಹೆಚ್ಚಳಕ್ಕೆ, ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.

15ನೇ ಹಣಕಾಸು ಯೋಜನೆಯಡಿ ಅನುದಾನ ಬಳಕೆಗೆ ಗ್ರಾಮ ಪಂಚಾಯಿತಿಗಳಿಗೆ ಪೂರ್ಣಾಧಿಕಾರ ನೀಡಬೇಕು. ಪ್ರತಿ ಗ್ರಾ.ಪಂ.ಗಳಿಗೆ ವಸತಿ ಯೋಜನೆಯಡಿ ಕನಿಷ್ಟ 50 ಮನೆಗಳನ್ನು ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.

ಅವಳಿ ಜಿಲ್ಲೆಯ 6500 ಗ್ರಾಮ ಪಂಚಾಯಿತಿ ಸದಸ್ಯರ ನಡುವೆ ನಿರಂತರ ಸಂಪರ್ಕದಲ್ಲಿ ಇದ್ದೇನೆ.‌ ಅವರ ಕುಂದುಕೊರತೆ ಗಳಿಗೆ ಸ್ಪಂದಿಸಿದ್ದೇನೆ. ಹೀಗಾಗಿ ಗೆಲುವು ಸುಲಭವಾಗಿದೆ ಎಂದರು.

ಬಾದಾಮಿ ಶಾಸಕ ಸಿದ್ದರಾಮಯ್ಯ, ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರು ತಮ್ಮ ಕ್ಷೇತ್ರಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ಮೆಚ್ಚಿದ್ದಾರೆ. ನನ್ನ ದುಡುಮೆಗೆ ಪಗಾರ ನೀಡಿದ್ದಾರೆ ಎಂದರು.

ಮುಖಂಡರಾದ ಹಮೀದ್ ಮುಶ್ರಫ್, ಡಾ. ಮಹಾಂತೇಶ ಬಿರಾದಾರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT