ಇಂಡಿ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಡಿರುವ ಹೃದಯ ವಿದ್ರಾವಕ ಘಟನೆ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಆತ್ಮಹತ್ಯೆ ಮಾಡಿಕೊಂಡ ತಾಯಿ ಎಂದು ಗುರುತಿಸಲಾಗಿದೆ. ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷ (1) ಸಾವಿಗೀಡಾಗಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಜಶ್ರೀ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿದ್ದಾನೆ. ಪತಿ ಊರಲ್ಲಿ ಇಲ್ಲದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪತಿ ಹಾಗೂ ರಾಜಶ್ರೀ ತವರು ಮನೆಯವರು ಬಂದ ಬಳಿಕ ತನಿಖೆ ನಡೆಸಲಿದ್ದು, ನಂತರ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-26-1193372711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.