ಮುದ್ದೇಬಿಹಾಳ: ಹಸಿರು ತೋರಣ ಗೆಳೆಯರ ಬಳಗ ಪರಿಸರ ಉಳಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಕೆಲಸ ಸಣ್ಣದಲ್ಲ. ಅದು ಭವಿಷ್ಯದಲ್ಲಿ ಜನರಿಗೆ ಗೊತ್ತಾಗುತ್ತದೆ ಎಂದು ವಿಜಯಪುರ ಸಿದ್ದಸಿರಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ಅವರು ಬುಧವಾರ ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು. ಪರಿಸರ ಸಂರಕ್ಷಣೆ ಇಂದಿನ ಅತ್ಯವಶ್ಯ ಜವಾಬ್ದಾರಿ ಆಗಿದೆ. ಹಸಿರು ತೋರಣ ಬಳಗದ ಸದಸ್ಯರು ಯಾವುದೇ ಪ್ರತಿಫಲ ನಿರೀಕ್ಷಿಸದೇ, ಎಲೆ ಮರೆಯ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಆರಂಭದಲ್ಲಿ ಸದಸ್ಯರು ಉದ್ಯಾನವನದಲ್ಲಿ ಗಿಡಗಳನ್ನು ನೆಟ್ಟು ನೀರೆರೆದರು. ಸಿದ್ದಸಿರಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕರ್ನಾಟಕ ಕೋ.ಆಪ್ ಬ್ಯಾಂಕ್ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಉಪಾಧ್ಯಕ್ಷ ಶ್ರೀಕಾಂತ ಚಲವಾದಿ ಹಾಗೂ ಕಾಯಕಯೋಗಿ ಪ್ರಶಸ್ತಿ ಪುರಸ್ಕೃತ ಮಹಾಬಲೇಶ್ವರ ಗಡೇದ ಅವರನ್ನು ಸನ್ಮಾನಿಸಲಾಯಿತು. ಬಳಗದ ಅಧ್ಯಕ್ಷ ಅಮರೇಶ ಗೂಳಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯದರ್ಶಿ ಬಸವರಾಜ ಬಿಜ್ಜೂರ, ಗೌರವಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಉಪಾಧ್ಯಕ್ಷ ವಿಲಾಸರಾವ್ ದೇಶಪಾಂಡೆ, ಮಾಜಿ ಅಧ್ಯಕ್ಷರಾದ ಬಿ.ಎಸ್.ಮೇಟಿ, ಅಶೋಕ ರೇವಡಿ, ನಾಗಭೂಷಣ ನಾವದಗಿ, ರವಿ ಗೂಳಿ, ಬಿ.ಎಚ್.ಬಳಬಟ್ಟಿ, ಸದಸ್ಯರಾದ ಬಿ.ಎಂ.ಪಲ್ಲೇದ, ಜಿ.ಎಂ.ಹುಲಗಣ್ಣಿ, ವಿಶ್ವನಾಥ ನಾಗಠಾಣ, ವೆಂಕನಗೌಡ ಪಾಟೀಲ, ರವಿ ತಡಸದ, ಶ್ರೀಶೈಲ ಮರೋಳ, ಡಾ.ವಿಜಯ ಗೂಳಿ, ಕಿರಣ ಪಾಟೀಲ, ವೀರೇಶ ಹಂಪನಗೌಡ್ರ, ಶ್ರೀನಿವಾಸ, ಹಣಮಂತ ದೇವರಳ್ಳಿ ಇದ್ದರು. ಬಿ.ಎಚ್.ಬಳಬಟ್ಟಿ ಸ್ವಾಗತಿಸಿದರು. ಮಹಾಬಲೇಶ್ವರ ಗಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗಭೂಷಣ ನಾವದಗಿ, ಬಸವರಾಜ ಬಿಜ್ಜೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-26-233039827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.