ನಾಲತವಾಡ: ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡುವ ಕಾರ್ಯ ಶುಕ್ರವಾರದಿಂದ ಆರಂಭವಾಗಿದೆ.

ನಾಲತವಾಡ ಪಟ್ಟಣದ ಪಶು ಆಸ್ಪತ್ರೆಯಲ್ಲಿ ವಿಜಯಪುರದ ಡಾ.ಸೋಯಲ್ ನೇತೃತ್ವದಲ್ಲಿಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಚಿಕಿತ್ಸೆ ನಂತರ ಸೆರೆ ಹಿಡಿದ ಸ್ಥಳಕ್ಕೆ ನಾಯಿಗಳನ್ನು ಬಿಡಲಾಗುವುದು.

‘ಪಟ್ಟಣದಲ್ಲಿ 220 ಬೀದಿ ನಾಯಿಗಳನ್ನು ಸರ್ವೆ ಮೂಲಕ ಗುರುತಿಸಲಾಗಿದೆ. ಇಲ್ಲಿಯವರೆಗೂ 20 ಬೀದಿ ನಾಯಿಗಳನ್ನು ಸೆರೆ ಹಿಡಿಯಲಾಗಿದೆ. ಅದರಲ್ಲಿ 15 ಬೀದಿ ನಾಯಿಗಳಿಗೆ ಈಗಾಗಲೇ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.ವಿವಿಧ ಬಡಾವಣಿಗಳಲ್ಲಿರುವ ಬೀದಿನಾಯಿಗಳನ್ನು ತೋರಿಸುವ ಜವಾಬ್ದಾರಿಯನ್ನು ಪೌರ ಕಾರ್ಮಿಕರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ವಹಿಸಲಾಗಿದೆ, ಇವರೊಂದಿಗೆ 5 ಜನ ಪರಿಣತ ಹೊಂದಿರುವವರು ಇರಲಿದ್ದಾರೆ. ಒಂದು ನಾಯಿ ಹಿಡಿಯಲು ಅವರಿಗೆ ₹ 200 ನೀಡಬೇಕು. ಸರ್ಕಾರದಿಂದ ಒಂದು ನಾಯಿಗೆ ಶಸ್ತ್ರಚಿಕಿತ್ಸೆಗಾಗಿ ₹1,450 ನೀಡುತ್ತದೆ. ನಾಯಿ ಹಿಡಿದು ಸಾಗಿಸಲುವಾಹನ ಸೌಲಭ್ಯ ಇದೆ.’ ಎಂದು ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರು ಮುಖ್ಯಾಧಿಕಾರಿ, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.