ವಿಜಯಪುರ: ‘ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ತಮ್ಮ ಸೌಮ್ಯ ಸ್ವಭಾವದಿಂದ ಕಾನೂನು ಪರಿಪಾಲಿಸುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ’ ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರು ಹೇಳಿದರು.

ಇಲ್ಲಿನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಸೇವಾ ನಿವೃತ್ತಿ ಹೊಂದಿದ ಕಲ್ಯಾಣ ಕರ್ನಾಟ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಹಾಗೂ ಇತರೆ ಸಿಬ್ಬಂದಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ‘ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೀವನದಲ್ಲಿ ಉತ್ತರೋತ್ತರ ಸುಖ ಸಂತೋಷ ತರಲಿ’ ಎಂದು ಹಾರೈಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ‘ಸಂಸ್ಥೆಯ ಸಿಬ್ಬಂದಿ ಸಹಕಾರದೊಂದಿಗೆ ನಾರಾಯಣಪ್ಪ ಕುರುಬರ ಅವರು ಸಂಸ್ಥೆ ಕಟ್ಟುವಲ್ಲಿ ಅವಿರತ ಶ್ರಮ ವಹಿಸಿದ್ದಾರೆ. ಖಡಕ್ ಅಧಿಕಾರಿಯಾಗಿದ್ದ ಕುರುಬರ ಅವರು, ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸುಮಧುರ ಒಡನಾಟ ಹೊಂದಿದ್ದರು. ಅವರೊಬ್ಬ ಸ್ನೇಹ ಜೀವಿ, ಅವರ ವಿಶ್ರಾಂತ ಜೀವನ ಆನಂದದಿಂದ ಕೂಡಿರಲಿ’ ಎಂದು ಆಶಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸೇವಾವಧಿಯುದ್ಧಕ್ಕೂ ಸಹಕಾರ ನೀಡಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸ್ಮರಿಸಿದರು.

ಸೋಮನಾಥ ಕಳ್ಳಿಮನಿ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ, ಅಡಿವೆಪ್ಪ ಸಾಲಗಲ್, ಒಡಲ ಧ್ವನಿ ಸಂಸ್ಥೆಯ ಅಧ್ಯಕ್ಷೆ ಭುವನೇಶ್ವರಿ ಮಾತನಾಡಿದರು.

ಸಮಾರಂಭದಲ್ಲಿ ನಾರಾಯಣಪ್ಪ ದಂಪತಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಮೇಯರ್ ಮಡಿವಾಳಪ್ಪ ಕರಡಿ, ವಕೀಲರ ಸಂಘದ ಅಧ್ಯಕ್ಷ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ವಿಭಾಗೀಯ ಕಚೇರಿ, ನಾನಾ ಘಟಕದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-1635110207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.