ವಿಜಯಪುರ: ‘ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಹತ್ವದ ಚರ್ಚೆ ಈ ಹಿಂದಿನ ದಿನಗಳಲ್ಲಿ ಬಂದಾಗ ಮಸೂದೆಯ ಪ್ರತಿಯನ್ನೇ ಹರಿದು ಹಾಕಿದ್ದರು, ಮಹಿಳೆಯಿಂದ ಆಡಳಿತ ಅಸಾಧ್ಯಎನ್ನುವ ಮನೋಭಾವ ಇತ್ತು, ಆದರೆ ಈಗ ‘ನಾರಿಶಕ್ತಿ ವಂದನ್ ಕಾಯ್ದೆ’ ಮೂಲಕ ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ ಅಪೂರ್ವ ಹೆಜ್ಜೆ ಇರಿಸಿದೆ’ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಡಾ. ವಿಜಯಲಕ್ಷ್ಮೀ ತುಂಗಳ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸನ ಸಭೆಗಳಲ್ಲಿ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಈ ಕಾಯ್ದೆ ಜಾರಿ ಬದಲಾವಣೆಯ ಪರ್ವವಾಗಿದೆ, 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಶೇ 40ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆ ಸಮರ್ಥವಾಗಿ ಆಡಳಿತ ಯಂತ್ರವನ್ನು ಮುನ್ನಡೆಸುತ್ತಿದ್ದಾರೆ’ ಎಂದರು.

‘ಆಡಳಿತದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗಬೇಕಿದೆ, ಮಹಿಳೆಯರಿಗೆ ಮತದಾನದ ಹಕ್ಕು ನೀಡಿದ ಅಂಬೇಡ್ಕರ್ ಅವರನ್ನು ಪ್ರತಿನಿತ್ಯ ನೆನೆಯಬೇಕು, ಈ ಮತದಾನದ ಹಕ್ಕಿನ ಬಲದಿಂದಲೇ ಆಡಳಿತದಲ್ಲಿ ಒಳಗೊಳ್ಳುವಿಕೆ ಸಾಧ್ಯವಾಗಿದೆ’ ಎಂದು ತಿಳಿಸಿದರು.

ಪಾಲಿಕೆ ಸದಸ್ಯೆ ಸ್ವಪ್ನಾ ಕಣಮುಚನಾಳ, ಶಿಲ್ಪಾ ಕುದರಗೊಂಡ, ಗೀತಾ ಚೌಧರಿ, ಈರಣ್ಣ ರಾವೂರ, ವಿಜಯ ಜೋಶಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-26-1104137523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.