ವಿಜಯಪುರ: ನೀಟ್ ಯುಜಿ 2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿರುವುದನ್ನು ಖಂಡಿಸಿ ಭೀಮ್ ರಾಜ್ಯ ದಲಿತ ಸೇವಾ ಸಮೀತಿ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕಬಾಡೆ ಮಾತನಾಡಿ, ‘ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷೆಯ ಸೋರಿಕೆಯಲ್ಲ, ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿ. 23 ಲಕ್ಷ ವಿದ್ಯಾರ್ಥಿಗಳು ಮೇ 3 ರಂದು ಬರೆದಿದ್ದ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇವರೆಲ್ಲ ಮುಂದೆ ವೈದ್ಯರಾಗುವ ಅಪಾರ ಕನಸಿನೊಂದಿಗೆ ಹಗಲು ರಾತ್ರಿ ಓದಿ ನೀಟ್ ಪರೀಕ್ಷೆ ಬರೆಯಲು ತಯಾರಾಗಿದ್ದವರು. ಆದರೆ, ಯಾವುದೇ ಅಕ್ರಮಗಳಿಲ್ಲದೆ ಒಂದು ಪರೀಕ್ಷೆಯನ್ನು ಮಾಡಲಾಗದಷ್ಟು ನಮ್ಮ ವ್ಯವಸ್ಥೆ ಅಪರಾಧಿಗಳ ಮೈದಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಅಪ್ಪುರಾಜ್ ನಿಮಾದಾರ, ನೀಲಾಂಬಿಕ ಕಟ್ಟಿಮನಿ, ಸೋಮಶೇಖರ ಕಬಾಡೆ, ರವಿ ರಾಠೋಡ, ವಿಜಯಕುಮಾರ ನಿಮಾದಾರ, ಚಂದ್ರಶೇಖರ ಕಟ್ಟಿಮನಿ, ಪ್ರಿಯಾಂಕಾ ನಿಮಾದಾರ, ಕವಿತಾ ಹೊಸಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-26-2021609270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.