ವಿಜಯಪುರ : ನೀಟ್ ಪರೀಕ್ಷೆಯಲ್ಲಿ ಮರುಕಳಿಸುತ್ತಿರುವ ಅಕ್ರಮವನ್ನು ಖಂಡಿಸಿ ಕೂಡಲೇ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ನಗರದಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು.

ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಸಂಪೂರ್ಣವಾಗಿ ಕುಸಿದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಅನ್ಯಾಯವಾಗುತ್ತಿದೆ ಎಂದರು.

ನೀಟ್ ಪರೀಕ್ಷೆಯ ಎಲ್ಲ ಅಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳನ್ನು ತಕ್ಷಣ ಬಂಧಿಸಬೇಕು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ದ್ರಾವಿಡ್ ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷ ಕಿರಣ ಗೌಡ ಬಿರಾದಾರ್, ಕಾರ್ಯದರ್ಶಿ ರಾಹುಲ್ ಕಳಸದವರ, ಮಂಜುನಾಥ ಕವಳಿ, ಪ್ರವೀಣ ಕರ್ನಾಳ, ಶರಣು ಯಾದಳ್ಳಿ, ವಿರೇಶ್, ಶ್ರಾವಣ, ಅಲ್ತಾಪ್, ಶಿವು, ವಿಜಯ್, ಅಜಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-1011496051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.