ವಿಜಯಪುರ: ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್ ಡಿಇ 2ನೇ ಗೇಟ್ ಎದುರಿಗಿರುವ ಬಜಾಜ್ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ತಡೆರಹಿತ ಆಧಾರ್ ಸೇವೆ: ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು, ತಡೆರಹಿತ ಆಧಾರ್ ಸಂಬಂಧಿತ ಸೇವೆ ಒದಗಿಸಲು ಕಾರ್ಯಾಚರಣೆ ಕಿಟ್ಗಳನ್ನು ಈ ಕೇಂದ್ರದಲ್ಲಿ ಅಳವಡಿಸಲಾಗಿದೆ. ಆಧಾರ್ ನೋಂದಣಿ, ಬಯೋಮೆಟ್ರಿಕ್ ನವೀಕರಣ, ದೋಷ ತಿದ್ದುಪಡಿ, ಕುಂದುಕೊರತೆ ನಿವಾರಣಾ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುತ್ತದೆ. ವಾರದ ಎಲ್ಲ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತದೆ.

ಈ ಆಧಾರ್ ಸೇವಾ ಕೇಂದ್ರವು ನೇರವಾಗಿ ಯುಐಡಿಎಐ ಅಡಿ ಕಾರ್ಯ ನಿರ್ವಹಿಸುತ್ತದೆ. ಗಾಲಿಕುರ್ಚಿ, ಶೌಚಾಲಯ, ಪ್ರತ್ಯೇಕ ಕುಂದುಕೊರತೆ ನಿವಾರಣಾ ವ್ಯವಸ್ಥೆಗಳಿವೆ. ಜನರು ಆನ್ಲೈನ್ನಲ್ಲಿ ಯುಐಡಿಎಐ ಆಧಾರ್ ಅಪಾಯಿಂಟ್ಮೆಂಟ್ ಪೋರ್ಟಲ್ಗೆ ಭೇಟಿ ನೀಡುವ ಮೂಲಕ ಆಧಾರ್ ಸೇವೆಗಾಗಿ ಮುಂಚಿತವಾಗಿಯೇ ಅಪಾಯಿಂಟ್ಮೆಂಟ್ ಕಾಯ್ದಿರಿಸಬಹುದು.

ಮಕ್ಕಳಿಗೆ ಉಚಿತ ಸೌಲಭ್ಯ: ಜಿಲ್ಲೆಯ 5ರಿಂದ 17 ವರ್ಷದ ಒಟ್ಟು 68 ಸಾವಿರ ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಸೌಲಭ್ಯವನ್ನು ಸೆ.30ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-26-2013469689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.