ವಿಜಯಪುರ: ‘ತಾನು ಕರಗಿದರೂ ಬೇರೊಬ್ಬರಿಗೆ ಬೆಳಕಾಗುವ ಮೇಣದ ಹಾಗೆ ಬದುಕಿ, ಇತರರಿಗೂ ಬೆಳಕಾಗಿ’ ಎಂದು ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ ಹೇಳಿದರು.

ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಐಸ್ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆ ಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನ, ಐಸ್ಕ್ರೀಮ್ ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದು ಹೇಳಿದರೆ, ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟು ಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮ ಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕು ನೀಡುವಂತಾಗಬೇಕು’ ಎಂದರು.

ಅಶೋಕ ಹಂಚಲಿ, ಬಸವನ ಬಾಗೇವಾಡಿ ಹಿರೇಮಠದ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರಮನ್ ಬಸವರಾಜ್ ಕೌಲಗಿ, ಗೌರವ ನಿರ್ದೇಶಕ ರಾಜಶೇಖರ ಕೌಲಗಿ ಮಾತನಾಡಿದರು.

ಡಿಡಿಪಿಯು ಆಗಿ ಪದಗ್ರಹಣ ಮಾಡಿದ ಕೆ.ಎ. ಉಪ್ಪಾರ ಹಾಗೂ ನಿವೃತ್ತರಾದ ಡಿಡಿಪಿಯು ಸಿ.ಕೆ.ಹೊಸಮನಿ, ನಿವೃತ್ತ ಪ್ರಾಂಶುಪಾಲ ಬಸವರಾಜ್ ಉಮರ್ಜಿ ಅವರನ್ನು ಸನ್ಮಾನಿಸಲಾಯಿತು.

ಕೂಡಿಗಿ ಸರ್ಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲ ಕೆ.ಜಿ.ಲಮಾಣಿ, ಪ್ರಾಂಶುಪಾಲ ಮಂಜುನಾಥ ಜುನಗೊಂಡ, ಮಂಜುನಾಥ ತುಮ್ಮರಮಟ್ಟಿ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-529375299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.