ವಿಜಯಪುರ: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೊನಿಗಳಿಗೆ ಮೂಲ ಸೌಲಭ್ಯ ಒದಗಿಸಿ’ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಮುದಾಯ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ, ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಯಿಸುವ ಬಗ್ಗೆ ಸದಸ್ಯರು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.

ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲ ಸೌಲಭ್ಯ ಒದಗಿಸಿ, ಈ ಸಮುದಾಯದ ಕಾಲೊನಿಗಳ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರ ಸೌಲಭ್ಯ ಒದಗಿಸಿದ್ದು, ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

2022 ರಿಂದ 2026ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಗಳ ಮಾಹಿತಿ ವಿವರ ಸಭೆಗೆ ಮಂಡಿಸಲಾಯಿತು.

ಈಗಾಗಲೇ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಿಳಂಬವಾಗದಂತೆ ಕ್ರಮ ವಹಿಸಿ ಯೋಜನೆ ಲಾಭ ಪಡೆದುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ಸಮುದಾಯದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳ ಶಿಕ್ಷಣಕ್ಕಾಗಿ ಗ್ರಂಥಾಲಯ ಸ್ಥಾಪನೆ, ವಿಜಯಪುರ ನಗರದ ವಾರ್ಡ್ ನಂ.6ರಲ್ಲಿ ಸಮುದಾಯ ಭವನದ ಮುಂಭಾಗದಲ್ಲಿರುವ ಚರಂಡಿ ಸಮರ್ಪಕ ಕಾಮಗಾರಿ, ಅತಿ ಹೆಚ್ಚು ಜನ ವಾಸಿಸುವ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆ, ಬೀದಿ ದೀಪ, ಈ ಸಮುದಾಯ ವಾಸಿಸುವ ಕಾಲೊನಿಯಲ್ಲಿ ಮೂಲ ಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಸಮಿತಿ ಸದಸ್ಯರು ಕೋರಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಹೆಸ್ಕಾಂ ಅಧಿಕ್ಷಕ ಎಂಜಿನಿಯರ್ ಸಿದ್ದಪ್ಪ ಬಿಂಜಗೇರಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯದ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸುನೀಲ ನಾರಾಯಣ ಭಜಂತ್ರಿ, ಸಂಜೀವಕುಮಾರ ದಶವಂತ, ಧರ್ಮಣ್ಣ ವಿಭೂತಿ, ರಾಹುಲ ಶಿಳ್ಳಿಕ್ಯಾತರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-26-591911420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.