ವಿಜಯಪುರ: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು, ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಬೇಕು. ಎಂಐಎಸ್ನಲ್ಲಿ ಸಮಯಕ್ಕೆ ಸರಿಯಾಗಿ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದರು.

ನೀರಿನ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ, ಹಸಿರು ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಮನರೇಗಾ ಯೋಜನೆಯಡಿ ತಾಲ್ಲೂಕುವಾರು ಗುರಿ ನಿಗದಿಪಡಿಸಲಾಗಿದೆ. ನಿಗದಿಪಡಿಸಿರುವ ಮಾನವ ದಿನಗಳ ಸೃಜನೆ ಮಾಡಿ ಗುರಿ ಸಾಧಿಸಲು ಅಧಿಕಾರಿಗಳು ಕ್ರಮ ವಹಸಿಬೇಕು ಎಂದರು.

ಈಗಾಗಲೇ ಅನುಮೋದನೆಗೊಂಡ ಪ್ರಗತಿ ಹಂತದ ಕೂಲಿ ಆಧಾರಿತ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಗ್ರಾ.ಪಂ.ಗಳಲ್ಲಿ ಎನ್.ಎಂ.ಆರ್. ಜನರೇಟ್ ಮಾಡಿ ಗ್ರಾಮೀಣ ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕು. ಎಷ್ಟು ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಯೋಜನೆಯ ಮೇಲೆ ಅವಲಂಬಿತರಾಗಿದ್ದಾರೆ. ಅಂತಹ ಕುಟುಂಬಗಳಿಗೆ ಉದ್ಯೋಗ ಒದಗಿಸಿ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಪ್ರತಿ 211 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ ಕೂಲಿಕಾರರ ಫೇಸ್ ಅಥೆಂಟಿಕೇಷನ್ ಅನ್ನು ಎರಡು ದಿನಗಳಲ್ಲಿ ಕಡ್ಡಾಯವಾಗಿ ಶೇ 100ರಷ್ಟು ಆರಂಭಿಸಬೇಕು. ಉದ್ಯೋಗ ಒದಗಿಸಿರುವ ಎಲ್ಲಾ ಕೂಲಿಕಾರರಿಗೆ ನಿಗದಿತ ಸಮಯದಲ್ಲಿ ಕೂಲಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲಿಯವರೆಗಿನ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಕೂಡಲೇ ಶೇ 100 ರಷ್ಟು ಪೂರ್ಣಗೊಳಿಸಬೇಕು ಎಂದರು.

2025-26ನೇ ಸಾಲಿನಲ್ಲಿ ಎಲ್ಲ ಅನುಮೋದಿತ ಕಾಮಗಾರಿಗಳಿಗೆ ಎನ್.ಎಂ.ಆರ್ ತೆಗೆಯಬೇಕು. ಈ ಎನ್.ಎಂ.ಆರ್. ಗಳನ್ನು ಶೂನ್ಯ ಮಾಡದೇ ಕಡ್ಡಾಯವಾಗಿ ಎಂ.ಐ.ಎಸ್ ಮಾಡಬೇಕು. ನರೇಗಾ ಕೂಲಿಕಾರರ ಇ-ಕೆವೈಸಿ ಮಾಡದಿದ್ದಲ್ಲಿ ಕೂಲಿಕಾರರಿಗೆ ಎನ್.ಎಂ.ಆರ್ ಜನರೇಟ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮುಂಬರುವ ಒಂದು ವಾರದಲ್ಲಿ ಕಡ್ಡಾಯವಾಗಿ ಎಲ್ಲ ನೋಂದಾಯಿತ ಕೂಲಿಕಾರರ ಇ-ಕೆವೈಸಿಯನ್ನು ಶೇ 100 ರಷ್ಟು ಪೂರ್ಣಗೊಳಿಸಬೇಕು. ಈ ವಿಷಯದ ಕುರಿತು ಸಂಬಂಧಪಟ್ಟ ಸಿಬ್ಬಂದಿಗೆ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಸ್ತುತ 2026-27ನೇ ಸಾಲಿನ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಈಗಾಗಲೇ ತಂತ್ರಾಂಶದಲ್ಲಿ ಎಂಟ್ರಿ ಮಾಡಲಾಗಿದ್ದು, ಗ್ರಾಮ ಪಂಚಾಯಿತಿ ಲಾಗಿನ್ ನಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಎರಡು ದಿನಗಳಲ್ಲಿ ತಾಲ್ಲೂಕು ಪಂಚಾಯಿತಿ ಲಾಗಿನ್ ಗೆ ಕಳುಹಿಸಬೇಕು. ರಾಜ್ಯ, ಜಿಲ್ಲಾ ಗುಣ ನಿಯಂತ್ರಣ, ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಒಂಬಡ್ಸ್ಮನ್ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಬೀತಾದ ಪ್ರಕರಣಗಳ ಮೊತ್ತವನ್ನು ಕೂಡಲೇ ವಸೂಲಾತಿ ಮಾಡಿ ಬ್ಯಾಂಕಿಗೆ ಭರಣಾ ಮಾಡಿ. ಜಿಲ್ಲಾ ಪಂಚಾಯಿತಿಗೆ ವರದಿ ಸಲ್ಲಿಸಬೇಕು ಎಂದರು.

ತಾಲ್ಲೂಕು ಹಂತದಲ್ಲಿ ಪ್ರಕರಣವಾರು ವಸೂಲಾತಿ ಪ್ರಗತಿ ಕುರಿತು ಪರಿಶೀಲಿಸಿ, ಈ ಪ್ರಕರಣಗಳನ್ನು ಸಾಬೀತುಪಡಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ವಾರ ಅಡಹಾಕ್ ಸಮಿತಿ ಸಭೆಗಳನ್ನು ಏರ್ಪಡಿಸಿ, ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು. ಎ.ಟಿ.ಆರ್ ವರದಿಯನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು. ಈ ವಿಷಯದ ಕುರಿತು ಸಂಬಂಧ ಪಟ್ಟ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಗತಿ ಸಾಧಿಸಲು ಇದೇ ವೇಳೆ ಸೂಕ್ತ ನಿರ್ದೇಶನ ನೀಡಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಅನುಷ್ಠಾನ ಇಲಾಖೆಗಳಡಿ ಪ್ರಗತಿ ಹಂತದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿಯ ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-26-1530861223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.