ವಿಜಯಪುರ: ಜಿಲ್ಲಾಡಳಿತ ವತಿಯಿಂದ ಆಚರಣೆಯಾಗುವ ಮಹನೀಯರ ಜಯಂತ್ಯುತ್ಸವ, ಸಭೆ-ಸಮಾರಂಭಗಳಿಗೆ ಮಹಾನಗರ ಪಾಲಿಕೆ ಸದಸ್ಯರನ್ನು ಆಹ್ವಾನಿಸಬೇಕು ಎಂದು ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಇತ್ತೀಚೆಗೆ ಲಿಖಿತ ಮನವಿ ಸಲ್ಲಿಸಿರುವ ಅವರು, ಜಯಂತ್ಯುತ್ಸವ ಹಾಗೂ ಸಭೆ, ಸಮಾರಂಭಗಳಿಗೆ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸುವುದು ಅಗತ್ಯವಾಗಿದೆ, ಆದರೆ ಬಹುತೇಕ ಸಭೆ, ಸಮಾರಂಭಗಳಲ್ಲಿ ಜಿಲ್ಲಾಡಳಿತ ಪಾಲಿಕೆ ಸದಸ್ಯರನ್ನು ಆಹ್ವಾನಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರ ಸಂಬಂಧಿಸಿದ ವಿಷಯಗಳನ್ನು ಮಂಡಿಸುವುದು, ಅಧಿಕಾರಿಗಳ ಗಮನಕ್ಕೆ ತರುವುದು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರ ಅಭಿಪ್ರಾಯ, ಬೇಡಿಕೆಗಳು ಪೂರ್ಣ ಪ್ರಮಾಣದಲ್ಲಿ ಜಿಲ್ಲಾಡಳಿತದ ಗಮನಕ್ಕೆ ಬರುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಭಾಗಿಯಾಗಬೇಕಾಗಿರುವುದು ಅಗತ್ಯ. ಪಾಲಿಕೆ ಸದಸ್ಯರು ಜನರಿಂದಲೇ ನೇರವಾಗಿ ಆಯ್ಕೆಯಾಗಿರುವುದರಿಂದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವು ಅವರಿಗೆ ಇರುತ್ತದೆ, ಈ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ನಡೆಯುವ ಮಹತ್ವದ ಸಭೆಗಳಿಗೆ, ಸರ್ಕಾರಿ ಕಾರ್ಯಕ್ರಮಗಳಿಗೆ ಹಾಗೂ ಜಯಂತ್ಯುತ್ಸವಗಳಿಗೆ ಕಡ್ಡಾಯವಾಗಿ ಪಾಲಿಕೆ ಸದಸ್ಯರನ್ನು ಆಹ್ವಾನಿಸುವಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಲಿಖಿತ ನಿರ್ದೇಶನ ನೀಡುವಂತೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-570002175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.