ವಿಜಯಪುರ: ‘ಪಂಚಾಯತ್ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಗ್ರಾಮೀಣ ಜನರ ಸಬಲೀಕರಣಕ್ಕೆ ಪ್ರಮುಖ ವೇದಿಕೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಹೇಳಿದರು.

ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘73ನೇ ಸಂವಿಧಾನ ತಿದ್ದುಪಡಿ ಮೂಲಕ ಪಂಚಾಯತಿಗಳಿಗೆ ದೊರೆತಿರುವ ಸಂವಿಧಾನಾತ್ಮಕ ಸ್ಥಾನಮಾನವು ಗ್ರಾಮೀಣ ಆಡಳಿತವನ್ನು ಶಕ್ತಿಶಾಲಿಯಾಗಿ ರೂಪಿಸಿದೆ. ಜನರ ಪಾಲ್ಗೊಳ್ಳುವಿಕೆ, ಪಾರದರ್ಶಕತೆ ಮತ್ತು ಜವಾಬ್ದಾರಿತನ ಹೆಚ್ಚಿಸುವ ಮೂಲಕ ನಾವು ಸಮಗ್ರ ಅಭಿವೃದ್ಧಿ ಸಾಧಿಸಬಹುದು’ ಎಂದು ಹೇಳಿದರು.

‘ದೇಶದ ಅಭಿವೃದ್ಧಿ ಆಗಬೇಕೆಂದರೆ ಗ್ರಾಮಗಳು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಪಾರದರ್ಶಕತೆಯಿಂದ ಶ್ರಮವಹಿಸಿದಲ್ಲಿ ಗ್ರಾಮಗಳ ಅಭಿವೃದ್ಧಿ ಹೊಂದಲು ಸಾಧ್ಯ ತಮ್ಮೆಲ್ಲರ ಸಹಯೋಗ, ಸಹಕಾರ, ಶ್ರದ್ಧೆ, ಶ್ರಮ ಈ ಎಲ್ಲಾ ಅಂಶಗಳನ್ನು ಒಳಗೊಂಡು ಕರ್ತವ್ಯ ನಿರ್ವಹಿಸಿದಲ್ಲಿ ಗ್ರಾಮಗಳು ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗುತ್ತವೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಮಾತನಾಡಿ, ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ನಮ್ಮ ದೇಶದ ಪ್ರಜಾಪ್ರಭುತ್ವದ ಆತ್ಮವನ್ನು ಪ್ರತಿಬಿಂಬಿಸುವ ಮಹತ್ವದ ದಿನವಾಗಿದೆ. ಗ್ರಾಮ ಮಟ್ಟದಲ್ಲಿ ಜನರಿಗೆ ಆಡಳಿತದ ಅಧಿಕಾರ ನೀಡುವ ಮಹತ್ವದ ವ್ಯವಸ್ಥೆಯೇ ಪಂಚಾಯತ್ ರಾಜ್ ವ್ಯವಸ್ಥೆ’ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವ ವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಓಂಕಾರಗೌಡ ಕಾಕಡೆ, ಪ್ರಕಾಶ ಭಟ್ ಮಾತನಾಡಿದರು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ. ಬಿ. ಕುಂಬಾರ, ಅಶೋಕ ಕಲಘಟಗಿ, ರಾಮಣ್ಣ ಅಥಣಿ, ವಿದ್ಯಾಧರ ನ್ಯಾಮಗೊಂಡ, ಸಂಜಯ ಕೋಟೆನ್ನವರ, ಆನಂದ ಸ್ವಾಮಿ, ರಾಮು ಅಗ್ನಿ, ಅನುಸೂಯಾ ಚಲವಾದಿ, ಭಾರತಿ ಚೆಲುವಯ್ಯ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-64097623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.