ವಿಜಯಪುರ: ‘ನನೆಗುದಿಗೆ ಬಿದ್ದಿದ್ದ ಬೂದಿಹಾಳ - ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೀರಾಪೂರ–ಬೂದಿಹಾಳ ಏತನೀರಾವರಿ ಯೋಜನೆಯ ಕಿರು ಕಾಲುವೆ (ಎಫ್.ಐ.ಸಿ) ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರತಿಯೊಬ್ಬ ರೈತನ ಜಮೀನಿಗೆ ನೀರು ಒದಗಿಸಬೇಕು’ ಎಂದು ಒತ್ತಾಯಿಸಿದರು.

‘2025ರಲ್ಲಿ ತಾಳಿಕೋಟಿ ತಾಲ್ಲೂಕಿನ ಕೊಡಗಾನೂರ ಕ್ರಾಸ್ ಬಳಿ 38 ಹಳ್ಳಿಗಳ ರೈತರು ಯೋಜನೆ ಆರಂಭಿಸಲು ಆಗ್ರಹಿಸಿ 12 ದಿನ ಧರಣಿ ನಡೆಸಿದ್ದರು. ಆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರು ಸ್ಥಳಕ್ಕೆ ಭೇಟಿ ನೀಡಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಕೊಟ್ಟ ಮಾತು ಉಳಿಸಿಕೊಳ್ಳಲು ಅವರು ವಿಫಲರಾಗಿದ್ದಾರೆ, ಸಚಿವರು ನುಡದಂತೆ ನಡೆದಿಲ್ಲ, ಮಾತಿಗೆ ತಪ್ಪಿದ್ದಾರೆ. ರೈತರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ತಾಳಿಕೋಟೆ ಭಾಗದ ಅಸ್ಕಿ, ನೀರಲಗಿ, ಬೆಕಿನಾಳ, ಜಲಪೂರ, ಬೆನ್ನಟ್ಟಿ ಸೇರಿದಂತೆ 38 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೂ ತೀವ್ರ ಕೊರತೆ ಉಂಟಾಗಿದೆ. ಕೃಷಿಗೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಜನರು ನಾಲ್ಕೈದು ಕಿ.ಮೀ. ದೂರ ಹೋಗಿ ನೀರು ತರಬೇಕಾದ ಪರಿಸ್ಥಿತಿ ಇದೆ’ ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪುರ ಮಾತನಾಡಿ, ‘ಯೋಜನೆ ಪೂರ್ಣಗೊಂಡರೆ 50,657 ಎಕರೆ ಜಮೀನು ನೀರಾವರಿಗೆ ಒಳಪಡುತ್ತದೆ. ಈಗಾಗಲೇ ಶೇ 90 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಶೇ 10 ರಷ್ಟು ಕಾಮಗಾರಿಗೆ ಸುಮಾರು ₹200 ಕೋಟಿ ಅನುದಾನ ಅಗತ್ಯವಿದೆ. ಸರ್ಕಾರ ತಕ್ಷಣ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಮತ್ತೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ, ರೈತ ಮುಖಂಡರಾದ ಎಂ.ಜಿ.ಯಂಕಂಚಿ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಬಸವನ ಬಾಗೇವಾಡಿ ತಾಲ್ಲೂಕು ಉಪಾಧ್ಯಕ್ಷ ಹೊನಕೇರೆಪ್ಪ ತೆಲಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1135337993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.