ವಿಜಯಪುರ: ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿ 340 ಮೊಬೈಲ್ಗಳನ್ನು ಜಪ್ತಿ ಮಾಡುವಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲೆಯ 26 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳನ್ನು ಆಧರಿಸಿ ಮೊಬೈಲ್ಗಳನ್ನು ಪತ್ತೆ ಹಚ್ಚಲಾಗಿದೆ ಎಂದರು.

ಮೊಬೈಲ್ ಕಳವು ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸೆಂಟ್ರಲ್ ಇಕ್ಯೂಪ್ಮೆಂಟ್ ಐಡೆಂಟಿಟಿ ರಿಜಿಸ್ಟ್ರಾರ್ ದೂರ ಸಂಪರ್ಕ ಇಲಾಖೆ ನಿರ್ಮಿಸಿದ ಡಿಜಿಟಲ್ ವ್ಯವಸ್ಥೆಯಾಗಿದ್ದು, ಮೊಬೈಲ್ ಕಳೆದು ಹೋದಾಗ ಟ್ರ್ಯಾಕ್, ಬ್ಲಾಕ್ ಹಾಗೂ ರಿಕವರಿ ಮಾಡಲು ಸಹಾಯಕವಾಗಿದೆ, ಈ ತಂತ್ರಾಶ ಆಧರಿಸಿ 340 ಮೊಬೈಲ್ಗಳನ್ನು ವಿವಿಧ ರಾಜ್ಯಗಳಿಂದ ಪತ್ತೆ ಹಚ್ಚಿ ಅದನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸಲಾಗಿದೆ ಎಂದರು.

ಮೊಬೈಲ್ ಬಳಕೆದಾರರು ತಮ್ಮ ಸಾಧನವನ್ನು ಐಎಂಇಐ ಸಂಖ್ಯೆಯ ಮೂಲಕ ಟ್ರ್ಯಾಕ್ ಮಾಡಲು ಸಹಾಯಕವಾಗಿದ್ದು, ಮೊಬೈಲ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಅನುಪಮ ಪಾತ್ರ ವಹಿಸಿದೆ ಎಂದರು.

ಎಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಸುನೀಲ್ ಕಾಂಬಳೆ, ಟಿ.ಎಸ್. ಸುಲ್ಪಿ, ಸಿಪಿಐ ಮಲ್ಲಯ್ಯ ಮಠಪತಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-26-1031318595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.