ವಿಜಯಪುರ: ಹೆಸ್ಕಾಂ ವಿಜಯಪುರದ ಶಾಖೆ-3ರ ವ್ಯಾಪ್ತಿಯಲ್ಲಿ ಬರುವ ಜಲನಗರ ಮುಖ್ಯ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಬೀದಿ ದೀಪಗಳ ಕಾಮಗಾರಿಗೆ ಸಂಬಂಧಿಸಿದ ಕಂಬಗಳನ್ನು ಸ್ಥಳಾಂತರಗೊಳಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿರುವುದರಿಂದ ಮೇ 31ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಜಲನಗರ ಫೀಡರ್ನ ಮೇಲೆ ಬರುವ ನವರಸಪುರ ಕಾಲೊನಿ, ರಾಘವೇಂದ್ರ ಕಾಲೊನಿ, ಯಾಸಿನ್ ಮಸೀದಿಯ ಹತ್ತಿರ, ಗಿರೀಶ ಬಡಾವಣೆ, ಜಲನಗರ, ಎಸ್.ಆರ್ ಕಾಲೋನಿ, ವಿವೇಕನಗರ, ಕೀರ್ತಿ ನಗರ, ಬಿಡಿಎ ಕಚೇರಿ ಹತ್ತಿರದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಹೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-337657858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.