ವಿಜಯಪುರ: ಪವರ್ ಗ್ರೀಡ್ ಸಂಸ್ಥೆ ನಮ್ಮ ದೇಶದಲ್ಲಿರುವ ಹೆಮ್ಮೆ, ಈ ಸಂಸ್ಥೆ ಸ್ಪರ್ಧಾತ್ಮಕವಾಗಿ ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪವರ್ ಗ್ರೀಡ್ ಸಿಎಸ್ಆರ್ ಅನುದಾನದಡಿ ಆರೋಗ್ಯ ಇಲಾಖೆ ಸಲಕರಣೆಗಳು, ಶಿಕ್ಷಣ ಇಲಾಖೆಗೆ 2500 ಮೇಜುಗಳ ವಿತರಣೆ ಸೇರಿದಂತೆ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ವಿದ್ಯುತ್ ವ್ಯವಸ್ಥೆ ಅಳವಡಿಕೆ, ಪ್ರವಾಸೋದ್ಯಮ ಇಲಾಖೆ ಎಸ್ ಸಿಪಿಟಿ, ಎಸ್ಪಿ ಯೋಜನೆಯಡಿ ಆರು ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಿತರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪವರ್ ಗ್ರೀಡ್ ಸಂಸ್ಥೆಯು ಸಿಎಸ್ಆರ್ ಅನುದಾನ ನೀಡಿದ್ದು ದೊಡ್ಡ ಕೊಡುಗೆಯಾಗಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ನಮ್ಮೊಂದಿಗೆ ಸದಾ ಕೈಜೋಡಿಸುತ್ತಿದೆ ಎಂದರು.

ಜಿಂದಾಲ್ ಸಂಸ್ಥೆಯೊಂದಿಗೆ ಸಮಾಲೋಚಿಸಿದ್ದು, ಜಿಲ್ಲೆಯಲ್ಲಿ 100 ವರ್ಷ ಪೂರೈಸಿದ ಸುಮಾರು 258 ಶಾಲೆಗಳ ಅಭಿವೃದ್ದಿಗೆ ಕೈಜೋಡಿಸಲು ಕೋರಿದೆ. ಆ ಅನುದಾನದಿಂದ ಸ್ಮಾರ್ಟ್ ಕ್ಲಾಸ್, ಶಾಲಾ ಕೊಠಡಿ, ದುರಸ್ತಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಲೆಗಳನ್ನು ಉನ್ನತೀಕರಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಜಿಲ್ಲೆಯ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ದೊರಕುವ ನಿಟ್ಟಿನಲ್ಲಿ ತುಂಬಾ ಕೆಲಸಗಳಾಗುತ್ತಿವೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪವರ್ಗ್ರೀಡ್ನ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ ಶರದ್, ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಅಲ್ಲಿಯ ಮಕ್ಕಳಿಗಾಗಿ ಶಿಕ್ಷಣ ಆರೋಗ್ಯ ಹಾಗೂ ಇತರೆ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರೊಂದಿಗೆ ಸಾಮಾಜಿಕ ಕಾರ್ಯಗಳನ್ನು ಏರ್ಪಡಿಸಿ ಜಿಲ್ಲೆಯ ಅಭಿವೃದ್ಧಿಗಾಗಿ ಸದಾ ಈ ಸಂಸ್ಥೆಯು ಎಂದೆಂದಿಗೂ ಕೈಜೋಡಿಸಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ ಕುಂಬಾರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಪವರ ಗ್ರಿಡ್ನ ಸಿ.ಜಿ.ಎಂ ಪ್ರೋಜೆಕ್ಟ್ ಮ್ಯಾನೇಜರ್ ಶಕುಂತಲಾ ಸಾಹೂ, ಎಚ್.ಆರ್. ಜಿ.ಎಂ. ತನ್ವೀರ, ಕನ್ಸಲಂಟ್ ಭೀಮಾಶಂಕರ ತುಗದೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಫಲಾನುಭವಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-26-143560140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.