ವಿಜಯಪುರ: ಖಾಸಗಿ–ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಹೋರಾಟ ನಡೆಸಿ ಬಂಧನಕ್ಕೆ ಒಳಗಾಗಿ 14 ದಿನಗಳಿಂದ ಜೈಲಿನಲ್ಲಿದ್ದ ಆರು ಮಂದಿ ಹೋರಾಟಗಾರರು ಬುಧವಾರ ಜೈಲಿನಿಂದ ಬಿಡುಗಡೆಯಾದರು.

ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಬಿ.ಭಗವಾನ್ ರೆಡ್ಡಿ, ಭೋಗೇಶ ಸೋಲಾಪುರ, ಸಿದ್ದರಾಮ ಹಳ್ಳೂರ ಮತ್ತು ಹುಳಶ್ಯಾಳದ ಸಂಗನ ಬಸವ ಸ್ವಾಮೀಜಿ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು, ಕುಟುಂಬದವರು, ಸ್ನೇಹಿತರು ಹೂವಿನ ಹಾರ ಹಾಕಿ ಅಭಿನಂದಿಸಿದರು. ಸಿಹಿ ತಿನ್ನಿಸಿದರು.

ಹೋರಾಟಗಾರ ಅನಿಲ ಹೊಸಮನಿ ಮಾತನಾಡಿ, ‘ಇದು ಜನರ ಗೆಲುವು. ಈ ಹೋರಾಟದ ಫಲವಾಗಿ ವಿಜಯಪುರ ಅಲ್ಲದೇ ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಡಲು ಮುಂದಾಗಿದೆ. ಇದು ಹೋರಾಟಕ್ಕೆ ದೊಡ್ಡ ಜಯ ತಂದುಕೊಟ್ಟಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.