ವಿಜಯಪುರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಯಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದು ನಿಯಮಾವಳಿ ಉಲ್ಲಂಘನೆಯಾಗಿದ್ದು, ಇವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತಪರ ಸಂಘಟನೆ, ದಲಿತ ಸಂಘಟನೆ ಹಾಗೂ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ ಸೊಲ್ಲಾಪುರ ಮಾತನಾಡಿ, ‘ಸರ್ಕಾರಿ ಕಚೇರಿಯಲ್ಲಿ ವೈಯಕ್ತಿಕ ಜನ್ಮದಿನ ಆಚರಿಸುವುದು ನಿಯಮಾವಳಿ ಉಲ್ಲಂಘನೆಯಾಗಿದೆ. ಅಲ್ಲದೇ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಕಚೇರಿಯ ಒಳಾಂಗಣದಲ್ಲಿ ಆಚರಿಸದೆ, ಹೊರಗಿನ ಪುಟ್ಪಾತ್ ಬಳಿ ಆಚರಿಸಿರುವುದು ಅವಮಾನಕರ ನಡೆ’ ಎಂದರು.

‘ಅಂಬೇಡ್ಕರ್ ಅವರು ಸಮಸ್ತ ದೇಶಕ್ಕೆ ಸಮಾನ ಹಕ್ಕುಗಳನ್ನು ನೀಡಿದ ಮಹಾನ್ ನಾಯಕರು. ಇಂತಹ ಮಹನೀಯರ ಬಗ್ಗೆ ಗೌರವ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ಅಮಾನತು ಮಾಡಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪೂರ, ದಲಿತ ಸಂಘರ್ಷ ಸಮಿತಿ ಮುಖಂಡ ಬಸವರಾಜ ಭೈರವಾಡಗಿ, ಮಲ್ಲಿಕಾರ್ಜುನ ಬಟಗಿ, ಕಿರಣ ಮೇಲಿನಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-780463244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.