ತಿಕೋಟಾ: ‘ಸಮಸ್ಯೆ ಹೊತ್ತು ಕಚೇರಿಗೆ ಬರುವ ಗ್ರಾಮೀಣ ಜನರಿಗೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ಒದಗಿಸಬೇಕು ಹಾಗೂ ಅವರೊಡನೆ ಗೌರವಯುತವಾಗಿ ವರ್ತಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ನವೀಕರಣಗೊಂಡ ಪಿಠೋಪಕರಣಗಳ ಕಚೇರಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ನಾವು ಕೆಲಸ ಮಾಡುವ ಸ್ಥಳ ಎಷ್ಟು ಸ್ವಚ್ಛವಾಗಿ ಇರುತ್ತದೆಯೋ ಅಷ್ಟು ಸಿಬ್ಬಂದಿಗೆ ಕೆಲಸ ನಿರ್ವಹಿಸಲು ಪ್ರೇರಣೆ ಸಿಗುತ್ತದೆ. ಇಂತಹ ಉತ್ತಮ ಯೋಜನೆಯನ್ನು ಹಾಕಿಕೊಂಡು ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗೆ ಅವಶ್ಯಕವಾಗಿ ಬೇಕಾಗಿರುವ ಟೇಬಲ್, ಕುರ್ಚಿ, ಗಣಕಯಂತ್ರ, ಪ್ರಿಂಟರ್ಸ್, ಶೌಚಾಲಯ, ಕುಡಿಯುವ ನೀರು ಮತ್ತು ಉತ್ತಮ ಪರಿಸರ ಒದಗಿಸಿರುವ ತಾಲ್ಲೂಕು ಪಂಚಾಯಿತಿಯ ಕಾರ್ಯ ಶ್ಲಾಘನೀಯ’ ಎಂದರು.

ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ತಾಲ್ಲೂಕು ಪಂಚಾಯಿತಿಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ, ಸಹಾಯಕ ಲೆಕ್ಕಾಧಿಕಾರಿ ಅನ್ವರಹುಸೇನ ನಧಾಪ, ಯೋಜನಾಧಿಕಾರಿ ಮಹಾಂತೇಶ ಬಾಗೇವಾಡಿ, ಸಹಾಯಕ ನಿರ್ದೇಶಕ ಶೋಭಕ್ಕ ಶಿಳೀನ, ಬಸವರಾಜ ಸಂಕಗೊಂಡ ಸೇರಿದಂತೆ ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-1744844670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.