ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಪೊಲೀಸ್ ದಾಳಿ ವೇಳೆ ತಪ್ಪಿಸಿಕೊಳ್ಳುವಾಗ ತೆಪ್ಪ ಮುಳುಗಿ ಮೂವರ ಸಾವು

Published 3 ಜುಲೈ 2024, 7:29 IST
Last Updated 3 ಜುಲೈ 2024, 7:29 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಕೊಲ್ಹಾರ ಸಮೀಪ ಬಳೂತಿ ಜಾಕ್ ವೆಲ್ ಬಳಿ ಮಂಗಳವಾರ ಸಂಜೆ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಹೋಗಿ ತೆಪ್ಪ ಮುಳುಗಿ ನಾಪತ್ತೆಯಾದವರ ಪೈಕಿ ಮೂವರ ಶವ ಪತ್ತೆಯಾಗಿವೆ. ಇನ್ನುಳಿದವರ ಪತ್ತೆ ಕಾರ್ಯಾಚರಣೆ ನಡೆದಿದೆ.

ಪುಂಡಲೀಕ ಯಂಕಂಚಿ, ತಯ್ಯಬ್ ಚೌಧರಿ, ದಶರಥ ಗೌಡರ ಅವರ ಶವ ಪತ್ತೆಯಾಗಿದ್ದು, ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.‌

ಮಂಗಳವಾರ ಸಂಜೆ ಏಳೆಂಟು ಜನರು ಕೂಡಿಕೊಂಡು ಕೃಷ್ಣಾ ನದಿ ತೀರದ ಬಳೂತಿ ಜಾಕ್ ವೆಲ್ ಬಳಿ ಇಸ್ಪೀಟ್ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿದಾಗ,‌ ಕೆಲವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಇನ್ನುಳಿದವರು ತೆಪ್ಪ ಏರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಅಧಿಕ ಬಾರದಿಂದ ತೆಪ್ಪ ಮಗುಚಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ. ಆರು ಜನ ನಾಪತ್ತೆಯಾಗಿದ್ದಾರೆ.

ನಿನ್ನೆಯಿಂದಲೇ ನಾಪತ್ತೆಯಾದವರಿಗಾಗಿ ಪೊಲೀಸರು ಅಗ್ನಿ ಶಾಮಕ ಸಿಬ್ಬಂದಿ ಮತ್ತು ಸ್ಥಳೀಯರ‌‌‌ ನೆರವಿನೊಂದಿಗೆ ಪತ್ತೆ ಕಾರ್ಯಾಚರಣೆ ನಡೆಸಿದರು.‌ ರಾತ್ರಿಯಾದ ಕಾರಣ ಸ್ಥಗಿತವಾಗಿದ್ದ ಕಾರ್ಯಾಚರಣೆ ಬುಧವಾರ ಬೆಳಿಗ್ಗೆಯಿಂದ ಮತ್ತೆ‌ ಆರಂಭವಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಸಾವಿಗೀಡಾದವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT