ವಿಜಯಪುರ: ನಗರದ ವಜ್ರಹನುಮಾನ್ ರೈಲ್ವೆ ಗೇಟ್ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಸದ ರಮೇಶ ಜಿಗಜಿಣಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ ನಡೆದಿದೆ.

ಬಹು ವರ್ಷಗಳ ಬೇಡಿಕೆಯಾದ ರೈಲ್ವೆ ಕೆಳಸೇತುವೆ ನಿರ್ಮಾಣವಾಗದೇ ಜನರು ನಿತ್ಯ ವಾಹನ ದಟ್ಟಣೆಯಿಂದ ಸಮಸ್ಯೆಗೆ ಸಿಲುಕಿದ್ದಾರೆ. ಸಚಿವ ಮತ್ತು ಸಂಸದ ಇಬ್ಬರು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಬದಲು ಕಾಲಹರಣ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಜ್ರಹನುಮಾನ್ ರೈಲ್ವೆ ಗೇಟ್ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಭಾರತೀಯ ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ. ಆದರೆ, ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಮಹತ್ತರ ಯೋಜನೆಯೊಂದಕ್ಕೆ ಹಿನ್ನಡೆಯುಂಟಾಗುತ್ತಿರುವುದಾಗಿ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ಹೊರಹಾಕಿದ್ದಾರೆ.

ಈಗಾಗಲೇ ರಸ್ತೆಯ ಲೆವೆಲ್ ಕ್ರಾಸಿಂಗ್ ಸಂಖ್ಯೆ 80 ರಲ್ಲಿ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಭಾರತೀಯ ರೈಲ್ವೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಹತ್ತಿರದ ಲೆವೆಲ್ ಕ್ರಾಸಿಂಗ್ ಸಂಖ್ಯೆ 80 ರಲ್ಲಿ ಈಗಾಗಲೇ ರಸ್ತೆ ಓವರ್ ಬ್ರಿಡ್ಜ್ (ಆರ್ಒಬಿ) ಒದಗಿಸಲಾಗಿದೆ. ಇದರ ಜೊತೆಗೆ ಕೆಳಸೇತುವೆ ನಿರ್ಮಿಸಲು ಇಲಾಖೆ ಸಂಪೂರ್ಣವಾಗಿ ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರದ ಅಧೀನದಲ್ಲಿರುವ ಸ್ಥಳೀಯ ಆಡಳಿತದಿಂದ ಪೂರಕ ಕಾಮಗಾರಿ ಕೈಗೊಳ್ಳದಿರುವುದರಿಂದ ಜನರ ಬಹುದಿನದ ಬೇಡಿಕೆ ಈಡೇರಿಕೆಗೆ ತೊಡಕುಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಂದಾಜು ₹14 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ. ಯೋಜನೆ ಅನುಷ್ಠಾನಗೊಂಡರೆ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಕಾಮಗಾರಿ ಸ್ಥಳದಲ್ಲಿ ವಿದ್ಯುತ್ ಮಾರ್ಗಗಳು, ಬಿಎಸ್ಎನ್ಎಲ್ ಕೇಬಲ್ಗಳು, ನೀರು ಸರಬರಾಜು ಪೈಪ್ಲೈನ್ಗಳು, ಒಳಚರಂಡಿ ವ್ಯವಸ್ಥೆ ಹಾಗೂ ಇತರೆ ಭೂಗತ ಉಪಯುಕ್ತತಾ ಸ್ಥಳಾಂತರ ಕಾಮಗಾರಿಗಳನ್ನು ಸ್ಥಳೀಯ ಸರ್ಕಾರ ನಿರ್ವಹಿಸಬೇಕಾಗಿದೆ. ಅದಕ್ಕಾಗಿ ₹8 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರದಿಂದ ಉಪಯುಕ್ತತಾ ಸ್ಥಳಾಂತರ ಕಾಮಗಾರಿಗಳಿಗೆ ಅಗತ್ಯವಿರುವ ನಿಧಿಯ ಅನುಮೋದನೆ ಇನ್ನೂ ಬಾಕಿ ಇದ್ದು, ಕೂಡಲೇ ಅನುದಾನ ಮಂಜೂರಿಸಬೇಕು. ಇಲ್ಲವಾದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣದಂಥ ಮಹತ್ತರ ಯೋಜನೆಗೆ ಹಿನ್ನಡೆಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಅಗತ್ಯವಿರುವ ಹಣವನ್ನು ಎಷ್ಟು ಬೇಗ ಬಿಡುಗಡೆ ಮಾಡುತ್ತದೆಯೋ ಹಾಗೂ ಎಷ್ಟು ಬೇಗ ಸ್ಥಳಾಂತರ ಕಾಮಗಾರಿ ಕೈಗೊಳ್ಳುತ್ತದೋ ಅಷ್ಟು ಬೇಗ ಜನರ ಮಹತ್ತರ ಬೇಡಿಕೆ ಈಡೇರಲಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಸಂಚಾರ ದಟ್ಟಣೆ ತಗ್ಗಲಿದೆ. ಜನರ ಬಹುದಿನದ ಕನಸು ನನಸಾಗಲಿದೆ ಎಂದು ಜಿಗಜಿಣಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.