ವಿಜಯಪುರ: ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ)ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದ್ದಾರೆ.

ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.

ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಭಿವೃದ್ಧಿಪಡಿಸಿರುವ DAMINI ಆ್ಯಪ್ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.

ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆಯಿದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುತ್ತದೆ. ಹವಾಮಾನ, ಮಳೆಯ, ಸಿಡಿಲು ಮತ್ತು ಮಿಂಚಿನ ಮುನ್ಸೂಚನೆಯ ಮಾಹಿತಿ ಮತ್ತು ಅಲರ್ಟ್ ಪಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ SACHET ಆ್ಯಪ್ ಪಡೆಯಬಹುದಾಗಿದೆ. ಈ ಅವಶ್ಯಕ ಆ್ಯಪ್ ಗಳಿಂದ ಜಿಲ್ಲೆಯಲ್ಲಿ ಜೀವಹಾನಿ, ಜಾನುವಾರುಗಳ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಕೃತಿ ವಿಕೋಪದ ತುರ್ತು ಪರಿಸ್ಥಿತಿಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯ ಟೊಲ್-ಫ್ರೀ ಸಂಖ್ಯೆ 1077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-1934206841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.