ವಿಜಯಪುರ: ರಾಮನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಶೋಭಾಯಾತ್ರೆ ಸಂಭ್ರಮದಿಂದ ನಡೆಯಿತು.

ಮೆರವಣಿಗೆಗೆ ಬುರಾಣಪೂರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾ ಚಾಲನೆ ನೀಡಿದರು. ‘ಜೈ ಶ್ರೀರಾಮ’ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದವು. ಭಗವಾ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತರು ರಾಮನ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.

ವಿವಿಧ ಪುಷ್ಪಗಳಿಂದ ಅಲಂಕೃತ ವಾಹನದಲ್ಲಿದ್ದ ಶ್ರೀರಾಮನ ಭವ್ಯ ಪ್ರತಿಮೆಯನ್ನು ಕಂಡು ದಾರಿಯುದ್ದಕ್ಕೂ ಜನರು ನಮಿಸಿದರು. ಶ್ರೀರಾಮ ಮಂದಿರದಿಂದ ಆರಂಭಗೊಂಡ ಭವ್ಯ ಶೋಭಾಯಾತ್ರೆ ಸಿದ್ಧೇಶ್ವರ ದೇವಾಲಯ, ಗಾಂಧಿ ವೃತ್ತ, ಶಿವಾಜಿ ಮಹಾರಾಜ ವೃತ್ತ ಮೊದಲಾದ ಮಾರ್ಗಗಳಲ್ಲಿ ಸಂಚರಿಸಿ ಅಂಭಾಭವಾನಿ ದೇವಾಲಯಕ್ಕೆ ತಲುಪಿ ಸಂಪನ್ನಗೊಂಡಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಉಮೇಶ್ ವಂದಾಲ, ಶಿವಾನಂದ ಭುಯ್ಯಾರ, ಶರಣು ಸಬರದ, ರಾಜು ಹಿರೇಮಠ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-26-598835423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.