ವಿಜಯಪುರ: ಮೇ ಹಾಗೂ ಜೂನ್ ತಿಂಗಳಿಗೆ ಸಂಬಂಧಿಸಿದ ಪಡಿತರ ಅಕ್ಕಿಯನ್ನು ಮೇ ತಿಂಗಳಿನಲ್ಲಿಯೇ ವಿತರಿಸಲು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದ್ದಾರೆ.

ಅಂತ್ಯೋದಯ ಅನ್ನಯೋಜನೆ ಪ್ರತಿ ಪಡಿತರ ಚೀಟಿಗೆ ಎರಡೂ ತಿಂಗಳ ಪಡಿತರ ಅಕ್ಕಿ ಒಟ್ಟು 70 ಕೆಜಿ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗೆ ಪ್ರತಿ ತಿಂಗಳು ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ಕಡ್ಡಾಯವಾಗಿ ಎರಡು ಪ್ರತ್ಯೇಕ ಬಯೋಮೆಟ್ರಿಕ್ ನೀಡುವ ಮೂಲಕ ಪಡಿತರ ಚೀಟಿದಾರರು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೇ ಹಾಗೂ ಜೂನ್ ತಿಂಗಳ ಅಕ್ಕಿಯನ್ನು ಜೂನ್ ನಲ್ಲಿ ವಿತರಣೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಸರ್ಕಾರವು ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿಕೊಳ್ಳದಿರಲು ಸೂಚಿಸಿದೆ. ಒಂದು ವೇಳೆ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-1433023218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.