ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.7ರ ಡೋಬಳೆ ಗಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ₹10 ಲಕ್ಷ, ವಾರ್ಡ ನಂ.21ರ ಗಣೇಶ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ₹10 ಲಕ್ಷ, ವಾರ್ಡ್ ನಂ.3ರ ಗ್ಯಾಂಗ್ ಬಾವಡಿ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ.7ಕ್ಕೆ ₹10 ಲಕ್ಷ, ವಾರ್ಡ ನಂ.6ರ ಕೆ.ಎಚ್.ಬಿ ಕಾಲೊನಿಯಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ₹10 ಲಕ್ಷ ಹಾಗೂ ವಿಕಲಚೇತನರ ಅಭಿವೃದ್ಧಿ/ಕಲ್ಯಾಣ ಕಾರ್ಯಕ್ರಮಕ್ಕಾಗಿ ₹20 ಲಕ್ಷ ಅನುದಾನ ಮಂಜೂರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.