ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ ಗ್ರಾಮೀಣ ವಲಯ; ಶಿಕ್ಷಕರ ದಿನಾಚರಣೆ ನಾಳೆ

Published 4 ಸೆಪ್ಟೆಂಬರ್ 2024, 16:14 IST
Last Updated 4 ಸೆಪ್ಟೆಂಬರ್ 2024, 16:14 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ವತಿಯಿಂದ ಎಸ್. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸೆ.5 ರಂದು ಬೆಳಿಗ್ಗೆ 11ಕ್ಕೆ ನಗರದ ಲಿಂಗದಗುಡಿ ರಸ್ತೆಯಲ್ಲಿರುವ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಶಿವಯೋಗ ಮತ್ತು ನಿಸರ್ಗ ಚಿಕಿತ್ಸೆ ಕೇಂದ್ರ ಚಿತ್ತರಗಿಯ ಬಸವಲಿಂಗ ಸ್ವಾಮಿಜಿ, ಶಿರೂರುನ ವಿಜಯ ಮಹಂತೇಶ್ವರ ತೀರ್ಥ ಸಾನ್ನಿಧ್ಯ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ.ಪಾಟೀಲ್ ಉದ್ಘಾಟಿಸಲಿದ್ದಾರೆ. ಶಾಸಕ ವಿಠ್ಠಲ ಕಟಕದೊಂಡ ಜ್ಯೋತಿ ಬೆಳಗಿಸುವರು. ಬಸನಗೌಡ ಆರ್ ಪಾಟೀಲ್ (ಯತ್ನಾಳ) ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡುವರು. ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಪ್ರಕಾಶ ಹುಕ್ಕೇರಿ, ಸಿ.ಎಸ್. ನಾಡಗೌಡ, ಸಂಸದ ರಮೇಶ ಜಿಗಜಿಣಗಿ ಭಾಗವಹಿಸಲಿದ್ದಾರೆ. 

ಕಾರ್ಯಕ್ರಮಕ್ಕೆ ವಿಜಯಪುರ ಗ್ರಾಮೀಣ ತಾಲ್ಲೂಕಿನ ಎಲ್ಲ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳು ಆಗಮಿಸುವಂತೆ ಶಿಕ್ಷಕ ದಿನೋತ್ಸವದ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT