ವಿಜಯಪುರ: 2025-26ನೇ ಸಾಲಿನಲ್ಲಿ ಹೊಸದಾಗಿ ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ 2013 ಜಿಲ್ಲಾಮಟ್ಟದ ಜಾಗೃತಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಜಿಲ್ಲಾಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾಗಲು ಬಯಸುವವರು ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಧಿಸುತ್ತಿರುವ 4 ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು, ಅವರಲ್ಲಿ ಇಬ್ಬರು ಮಹಿಳೆಯರು ಇರಬೇಕು. ಒಟ್ಟು 4 ಜನ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

ಈ ಸಮಿತಿಗೆ ಸದಸ್ಯರಾಗ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೇ 10ರ ಮಧ್ಯಾಹ್ನ 1.30 ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಅವರ ಕಚೇರಿಯಿಂದ ಮೇ 5ರೊಳಗಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-26-1802941157

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.