ವಿಜಯಪುರ: ವಿಜಯಪುರ ನಗರದಲ್ಲಿರುವ ಸಾಯಿಪಾರ್ಕ್ ವಸತಿ ನಿಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಅನಧಿಕೃತ ವ್ಯಕ್ತಿಗಳನ್ನು ಇಲ್ಲಿಂದ ಹೊರಹಾಕಬೇಕು ಎಂದು ಆಗ್ರಹಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಅರವಿಂದ ಲಂಬು ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, ‘ವಸತಿ ನಿಲಯದಲ್ಲಿ ನೋಂದಣಿ ಇಲ್ಲದ ಅನೇಕ ವ್ಯಕ್ತಿಗಳು ವಾಸಿಸುತ್ತಿದ್ದು, ಕೆಲವರು ಮಾದಕ ವ್ಯಸನಗಳಲ್ಲಿ ತೊಡಗಿ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭದ್ರತೆ ಹಾಗೂ ಶೈಕ್ಷಣಿಕ ವಾತಾವರಣ ಹದಗೆಡುತ್ತಿದೆ’ ಎಂದರು.

ಪರಿಷತ್ ರಾಜ್ಯ ಉಪಾಧ್ಯಕ್ಷ ಕಿರಣ್ ಗೌಡ ಬಿರಾದಾರ, ಸಂಘಟನಾ ಕಾರ್ಯದರ್ಶಿ ರಾಹುಲ್ ಕಳಸದವರ, ಸದಸ್ಯ ಮಂಜು ಕವಳಿ, ಪ್ರವೀಣ್ ಕರ್ನಾಳ, ಪ್ರತಾಪ್, ಶರಣು, ಶ್ರವಣ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-711114144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.