ವಿಜಯಪುರ: ಪ್ರಸ್ತುತ ಲಭ್ಯವಿರುವ ಇಲಾಖಾವಾರು ನಿಗದಿಪಡಿಸಿದ ಅನುದಾನದಲ್ಲಿ ಮುಂಬರುವ ಸಭೆಯೊಳಗಾಗಿ ಶೇ 100ರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಸಕ್ತ ವರ್ಷದಲ್ಲಿ ನಿಗದಿ ಪಡಿಸಿದ ಅನುದಾನವನ್ನು ಭೌತಿಕ ಹಾಗೂ ಆರ್ಥಿಕ ಗುರಿಗೆ ಅನುಗುಣವಾಗಿ ಸಮರ್ಪಕವಾಗಿ ಬಳಸಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಯೋಜನಗಳಿಗೆ ನಿಗದಿಪಡಿಸಿದ ಅನುದಾನವನ್ನು ಸಮಪರ್ಕವಾಗಿ ಬಳಸಿಕೊಂಡು ಅನುದಾನ ಬಾಕಿ ಉಳಿಯದಂತೆ ತ್ವರಿತವಾಗಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಿ ವರದಿ ನೀಡಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಹೆಸ್ಕಾಂ ಅಧೀಕ್ಷಕ ಎಂಜಿನಿಯರ್ ಸಿದ್ದಪ್ಪ ಬಿಂಜಗೇರಿ, ಜಿಲ್ಲಾ ಆಯುಷ್ ಅಧಿಕಾರಿ ವಿದ್ಯಾವತಿ ಅಥಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಶಿವನಗೌಡ ಪಾಟೀಲ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಲೀಡ್ ಬ್ಯಾಂಕ್ನ ವ್ಯವಸ್ಥಾಪಕ ಸಿದ್ದಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.