ವಿಜಯಪುರ: ಶಾಸ್ತ್ರಿ ನಗರ ಸ್ಲಂ ನಲ್ಲಿರುವವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕೆಂದು ಆಗ್ರಹಿಸಿ ಶಾಸ್ತ್ರಿ ನಗರ ಸ್ಲಂ ನಿವಾಸಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಾಸ್ತ್ರಿ ನಗರ ಸ್ಲಂ ಸಮಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ಅಣೇಕಲ್ ಮಾತನಾಡಿ, 2008ರಲ್ಲಿ ಶಾಸ್ತ್ರಿ ನಗರ ಸ್ಲಂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಕಾಯ್ದೆಯಡಿ ಘೋಷಣೆಯಾಗಿದ್ದು, ನಿವಾಸಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಹಾಗೂ 2019ರಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಆಯ್ಕೆ ಮಾಡಿ, ನಿವಾಸಿಗಳಿಂದ ತಲಾ ₹50,000 ಡಿಡಿ ಪಡೆದುಕೊಳ್ಳಲಾಗಿತ್ತು. ಆದರೆ 7 ವರ್ಷ ಕಳೆದರೂ ಮನೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಈ ಕುರಿತು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸರ್ಕಾರದಿಂದ ಹಣ ಬಂದಿಲ್ಲ ಎಂಬ ಉತ್ತರ ನೀಡಲಾಗುತ್ತಿದೆ ಎಂದರು.

ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟದ ಅಧ್ಯಕ್ಷ ಮುತ್ತು ಭೋವಿ ಮಾತನಾಡಿ, ಇತ್ತೀಚೆಗೆ ಮಹಾನಗರ ಪಾಲಿಕೆ ಸಿಬ್ಬಂದಿ ಮನೆ ತೆರವುಗಾಗಿ ಸರ್ವೆ ನಡೆಸುತ್ತಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಈ ವಿಷಯ ಹೈಕೋರ್ಟ್ನಲ್ಲಿದ್ದರೂ ಸಹ ಜನರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ಮಹಾನಗರ ಪಾಲಿಕೆಯವರೇ ಹೊಣೆಗಾರರಾ ಗಲಿದ್ದಾರೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮೈರುನ ಕೊಡೆಕಲ್, ಸುಶಿಲಾ ದೇಸಾಯಿ, ಹಸೀನಾ ಪಟವೇಗಾರ, ಮಲ್ಲವ್ವ ಕಗ್ಗೋಡ, ಮೈರುನ ಮಕಾನದಾರ, ಹಶೀನಾ, ಮೈಬುಬ, ಮೈನೊದ್ದೀನ್ ಮಕಾನದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-521645411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.