ಶುಕ್ರವಾರ, ಡಿಸೆಂಬರ್ 4, 2020
23 °C

ಶೂಟೌಟ್‌ ಪ್ರಕರಣ: ಮತ್ತೆ ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕಾಂಗ್ರೆಸ್‌ ಮುಖಂಡ ಮಹಾದೇವ ಸಾಹುಕಾರ ಬೈರಗೊಂಡ ಅವರು ಚಲಿಸುತ್ತಿದ್ದ ಕಾರಿಗೆ ನ. 2ರಂದು ಕನ್ನಾಳ ಕ್ರಾಸ್‌ ಬಳಿ ಟಿಪ್ಪರ್‌ನಿಂದ ಡಿಕ್ಕಿ ಹೊಡೆಸಿ, ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಜನರನ್ನು ಬಂಧಿಸಿದ್ದ ತನಿಖಾ ತಂಡವು, ಆರೋಪಿಗಳಾದ ವಿಜಯಪುರ ನಗರದ ಇಂಡಿ ರೋಡ್‌ನ ಬಂಬಳ ಅಗಸಿ ನಿವಾಸಿಗಳಾದ ಹಸನ್‌ ಡೋಂಗ್ರಿ ಉರುಫ್‌ ಡೋಂಗ್ರಿಸಾಬ ಬಡೇಗರ(24), ಕಲ್ಲಪ್ಪ ಉರುಫ್‌ ಮುದಕಪ್ಪ ಬಜಂತ್ರಿ(24) ಮತ್ತು ಈರಣ್ಣ ಬಜಂತ್ರಿ(21) ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೂರು ಮೊಬೈಲ್‍ಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು