ಭಾನುವಾರ, ನವೆಂಬರ್ 29, 2020
21 °C

ಶೂಟೌಟ್‌ ಪ್ರಕರಣ: ಮತ್ತೆ ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕಾಂಗ್ರೆಸ್‌ ಮುಖಂಡ ಮಹಾದೇವ ಸಾಹುಕಾರ ಬೈರಗೊಂಡ ಅವರ ಕಾರಿಗೆ ನಗರದ ಹೊರ ವಲಯದ ಕನ್ನಾಳ ಕ್ರಾಸ್ ಹತ್ತಿರ ನ.2ರಂದು ಟಿಪ್ಪರ್‌ ಡಿಕ್ಕಿ ಹೊಡೆಸಿ ಬಳಿಕ ಗುಂಡಿನ ದಾಳಿ ನಡೆಸುವ ಮೂಲಕ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ತನಿಖಾ ತಂಡ ಗುರುವಾರ ಮತ್ತೆ ಮೂವರನ್ನು ಬಂಧಿಸಿದೆ.

ಇಂಡಿ ತಾಲ್ಲೂಕಿನ ದೇಗಿನಾಳದ ಸಂಘರ್ಷ ಸೂರ್ಯವಂಶಿ(23), ಉಮರಾಣಿಯ ಸಂಗಪ್ಪ ಯಮದೆ(35) ಮತ್ತು ವಿಜಯಪುರ ಜಲನಗರದ ಚೇತನ ‌ಶಿರಶ್ಯಾಡ(30) ಬಂಧಿತ ಆರೋಪಿಗಳಾಗಿದ್ದಾರೆ.

ಶೂಟೌಟ್‌ ಪ್ರಕರಣದಲ್ಲಿ ಆರೋಪಿಗಳು ಬಳಸಿದ್ದ ಒಂದು ಬೈಕ್‌, ಎರಡು ಮೊಬೈಲ್ ಹಾಗೂ ಒಂದು ಏರ್ ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.  

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 19 ಜನ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು