ಚಡಚಣ: ಸಿದ್ದೇಶ್ವರ ಶ್ರೀಗಳ ನುಡಿನಮನ, ಪುಸ್ತಕ ಬಿಡುಗಡೆ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮವನ್ನು ಇದೇ 28 ರಂದು ಚಡಚಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಮಹೇಂದ್ರಕುಮಾರ ನಾಯಕ್ ತಿಳಿಸಿದರು.

ಪಟ್ಟಣದ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಕಾರ್ಯಕ್ರಮ ನಿಮಿತ್ಯ ಮಂಗಳವಾರ ಸಂಜೆ ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮೇ 28 ರಂದು ನಡೆಯುವ ಸಿದ್ದೇಶ್ವರ ಶ್ರೀಗಳ ನುಡಿನಮನ ಕಾರ್ಯಕ್ರಮವನ್ನು ಅವರ ಅನುಯಾಯಿಗಳು, ಭಕ್ತರ ನೇತ್ರತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಸಾಹಿತಿ ರಾಜಶೇಖರ ಮಠಪತಿ(ರಾಗಂ) ಅವರು ಸಿದ್ದೇಶ್ವರ ಶ್ರೀಗಳ ಕುರಿತು ಬರೆದ ‘ಯೋಗಸ್ಥ’ ಪುಸ್ತಕ ಬಿಡುಗಡೆ, ಜೋಡೆತ್ತು ಹೊಂದಿದ ಪ್ರಗತಿಪರ ರೈತರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದರು.

ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ,ಸಾಹಿತಿ ಬಸವರಾಜ ಯಂಕಂಚಿ,ಸಂಗಮೇಶ್ವರ ಸಂಸ್ಥೆ ಅಧ್ಯಕ್ಷ ಗಂಗಾಧರ ಪಾವಲೆ,ಮುಖಂಡ ಕಾಂತುಗೌಡ ಪಾಟೀಲ ಮುಂತಾದವರು ಮಾತನಾಡಿದರು. ಕಾರ್ಯಕ್ರಮ ಸಾನಿಧ್ಯ ವಹಿಸಿದ ಸ್ಥಳಿಯ ವಿರಕ್ತಮಠದ ಷಡಕ್ಷರಿ ಜ್ವಾಮೀಜಿ,ಗುರುದೇವಾಶ್ರಮದ ಯೋಗಾನಂದ ಸ್ವಾಮೀಜಿ ಮಾತನಾಡಿದರು.

ಸಭೆಯಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಮುಖಂಡರಾದ ಅಶೋಕ ಕುಲಕರ್ಣಿ,ರಾಜು ಝಳಕಿ, ರಾಜುಸಾಹುಕಾರ ಡೋಣಗಾಂವ, ವೈದ್ಯ ಡಿ.ಬಿ.ಕಟಗೇರಿ, ಆರ್.ಪಿ.ಬಗಲಿ, ನಾಗನಾಥಗೌಡ ಬಿರಾದಾರ ಸುಧಾಕರ ಬಗಲಿ ಮಹಾದೇವ ನಗರೆ, ತುಕಾರಾಮ ಬೋಗಾರ, ರಾವಸಾಬ ಬಿರಾದಾರ, ಸಂತೋಷ ದೇಶಪಾಂಡೆ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಗ್ರಾಮಗಳ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-403778269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.