ಚಿಂಚೋಳಿ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಸಿದ್ಧಸಿರಿ ಎಥೆನಾನ್ ಮತ್ತು ಪವರ್ ಘಟಕದ ನಿರ್ದೇಶಕರಾಗಿರುವ ಆಕಾಶ ಗುತ್ತೇದಾರ ಅವರನ್ನು ವಿಜಯಪುರದ ಸಿದ್ಧಸಿರಿ ಬಹುರಾಜ್ಯ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಜಯಪುರ ಮೂಲದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಈಚೆಗೆ ಸಿದ್ಧಸಿರಿ ಮಲ್ಟಿ ಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಆಗಿ ದೇಶದ ತುಂಬಾ ವ್ಯವಹಾರ ನಡೆಸಲು ಮಾನ್ಯ ಮಾಡಲಾಗಿದೆ.

ಸಂಘದ ಉಪ ನಿಯಮ ಹಾಗೂ ಸಹಕಾರಿ ಸಂಘಗಳ ಕಾಯ್ದೆಯ ಅನುಸಾರ ಆಡಳಿತ ಮಂಡಳಿಯ ಸಭೆಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಸಂಘದ ಸಿಇಒ ಜ್ಯೋತಿಬಾ ಎಂ.ಖಂಡಾಗ್ಳೆ ತಿಳಿಸಿದ್ದಾರೆ. ಸದರಿ ಸಂಘವು ರಾಜ್ಯದಲ್ಲಿ 215 ಶಾಖೆಗಳನ್ನು ಹೊಂದಿದ್ದು, ಸುಮಾರು ₹5 ಸಾವಿರ ಕೋಟಿ ಠೇವಣಿಯನ್ನು ಹೊಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-31-288922069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.