ಸಿಂದಗಿ: ‘ಪ್ರತಿ ವರ್ಷವೂ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಮೂಲಕ ಸಾರಂಗಮಠ-ಗಚ್ಚಿನಮಠದ ಚೆನ್ನವೀರಶ್ರೀಗಳ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುತ್ತ ಬರಲಾಗಿದೆ’ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.

ನಗರದ ಸಾರಂಗಮಠದ ಆವರಣದಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್.ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಅನುಗ್ರಹ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ದತ್ತಾತ್ರೇಯ ಹೊಸಮಠ ಮಾತನಾಡಿ, ‘ವಿಜಯಪುರ ನಗರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಪ್ರಾರಂಭಗೊಂಡು 25 ವರ್ಷಗಳಾಗಿದ್ದು, ಈ ಅವಧಿಯಲ್ಲಿ ನೇತ್ರ ತಜ್ಞರಾದ ಪ್ರಭುಗೌಡ ಚಬನೂರ (ಲಿಂಗದಳ್ಳಿ) ಅವರ ನೇತೃತ್ವದಲ್ಲಿ 50 ಸಾವಿರ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ, 3 ಲಕ್ಷ ಹೊರರೋಗಿಗಳಿಗೆ ಉಚಿತ ತಪಾಸಣೆ ಮಾಡಲಾಗಿದೆ’ ಎಂದು ವಿವರಿಸಿದರು.

ಸಾರಂಗಮಠ- ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಸಹ-ಕಾರ್ಯದರ್ಶಿ ಅಶೋಕ ವಾರದ, ಪ್ರಾಧ್ಯಾಪಕ ನಾಗರಾಜ ಮುರಗೋಡ, ಮಹಾಂತೇಶ ಹಿರೇಮಠ, ಶ್ರೀದೇವಿ ಸಿಂದಗಿ, ವಿ.ಆರ್. ಪಾಟೀಲ, ಬಸಯ್ಯ ಗೋಲಗೇರಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-392048073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.