ಸಿಂದಗಿ: ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಸ್ಯಾಟ್ಲೈಟ್ ಬಸ್ ನಿಲ್ದಾಣಕ್ಕೆ ನಗರದ ಹೊರ ವಲಯ ಗೋಲಗೇರಿ ರಸ್ತೆಯಲ್ಲಿನ ಗ್ರಾಮೀಣ ನಿರ್ಮಿತ ಕೇಂದ್ರಕ್ಕೆ ಸಂಬಂಧಿಸಿದ ಎರಡು ಎಕರೆ ಜಮೀನಿನಲ್ಲಿ 1 ಎಕರೆ 13 ಗುಂಟೆ ಜಮೀನನ್ನು ವಿಜಯಪುರ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರಿಗೆ ವರ್ಗಾವಣೆಗೊಂಡಿದೆ. ಜೊತೆಗೆ ಸ್ಯಾಟ್ಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಇಲಾಖೆ ಸಚಿವರು ₹50 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 60 ಸಾವಿರ ಜನಸಂಖ್ಯೆ ಹೊಂದಿದ ನಗರವು ನಗರಸಭೆಯಾಗಿ ಮೇಲ್ದರ್ಜೆಗೇರಿದೆ. ಈಗಿರುವ ಚೆನ್ನವೀರಸ್ವಾಮೀಜಿ ಕೇಂದ್ರ ಬಸ್ ನಿಲ್ದಾಣವು ಅತ್ಯಂತ ಇಕ್ಕಟ್ಟಿನ ಸ್ಥಳ, ಜನನಿಬಿಡ ಪ್ರದೇಶದಲ್ಲಿ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್ ನಿಲ್ದಾಣದ ಅಗತ್ಯತೆ ಅರಿತು ಸ್ಯಾಟ್ ಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ ಎಂದರು.

ಜಮೀನು ಸಾರಿಗೆ ನಿಗಮಕ್ಕೆ ವರ್ಗಾವಣೆಗೊಂಡಿದ್ದರಿಂದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಸಾರಿಗೆ ನಿಗಮದಿಂದ ₹1 ಕೋಟಿ ಮಂಜೂರಾಲಿದೆ’ ಎಂದು ಶಾಸಕರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-579986539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.