ವಿಜಯಪುರ: ಸ್ಮಶಾನ ಭೂಮಿ ಒತ್ತುವರಿ ಸರ್ವೆ ಮಾಡಿ, ಬೇಲಿ ಅಳವಡಿಸಿ, ಹದ್ದುಬಸ್ತ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ 1989 ಪ್ರತಿಬಂಧ ಕಾಯ್ದೆಯಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಭೆಯಲ್ಲಿದ್ದುಕೊಂಡು ಮಾತು ಕೇಳಿಸಿಕೊಂಡು ಹೋಗುವುದಲ್ಲ. ನಿಮ್ಮ ಹಂತದಲ್ಲಿ ಪರಿಹಾರ ಕಲ್ಪಿಸಬೇಕು. ಸ್ಮಶಾನ ಭೂಮಿ ಸಿಗುವುದೇ ಕಷ್ಟ. ಹಾಗಾಗಿ ಅದಕ್ಕೆ ಪರಿಹಾರ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು’ ಎಂದು ಸೂಚಿಸಿದರು.

‘ಸ್ಮಶಾನ ಸಮಸ್ಯೆ ಇದ್ದಲ್ಲಿ ಸಂಬಂಧಿಸಿದವರ ಗಮನಕ್ಕೆ ತರಬೇಕು. ಈ ಸಭೆಯಲ್ಲಿ ಚರ್ಚೆಯಾದ ವಿಷಯ ಹಾಗೂ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಬೇಕು’ ಎಂದರು.

ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮ ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.

ಆರೋಗ್ಯ ಇಲಾಖೆಯಲ್ಲಿ ಸಂಪರ್ಕ ಸಂವಹನ ಸಾಧಿಸಲು ಹೆಲ್ಪ್ಲೈನ್ ಸ್ಥಾಪಿಸಿ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜಮೀನಿನಲ್ಲಿ ವಿದ್ಯುತ್ ಕಂಬಗಳ ಎಲ್. ಟಿ ವೈಯರ್ ಹಾಕಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು’ ಎಂದರು.

ದೌರ್ಜನ್ಯ ಪ್ರಕರಣಗಳ ಪಟ್ಟಿ ಮಾಡಿ ಬೇಗ ಇತ್ಯರ್ಥ ಮಾಡಿ, ವಿಳಂಬ ಮಾಡದೇ ನಿಗದಿತ ಕಾಲಾವಧಿಯಲ್ಲಿ ವಿಲೇವಾರಿ ಮಾಡಬೇಕು. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಳ್ಳದೇ ಪರಿಹಾರ ಧನ ಒದಗಿಸಬೇಕು ಎಂದರು.

ನಿಗದಿತ ಸಮಯಕ್ಕೆ ಕುಂದು ಕೊರತೆ ಸಭೆ ನಡೆಸಿ, ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತಾ ನಿವಾರಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಸಭೆಯಲ್ಲಿ ಚರ್ಚೆಯಾಗುವ ಸಮಸ್ಯೆಗಳಿಗೆ ಪರಿಹಾರ ಕ್ರಮ ತೆಗೆದುಕೊಳ್ಳಬೇಕು. ವೈಯಕ್ತಿಕವಾಗಿ ಸಾರ್ವಜನಿಕರು ಅಧಿಕಾರಿಗಳ ಗಮನಸೆಳೆದರೆ ಅವರ ಸಮಸ್ಯೆಗಳನ್ನು ಬೇಗ ಪರಿಹರಿಸಬೇಕು. ಇನ್ನೊಂದೆಡೆ ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿರುವ ವಿಷಯದ ಕಡೆಗೆ ಗಮನಹರಿಸಿ ಸಮಾಜ ಕಲ್ಯಾಣ ಇಲಾಖೆಗೆ ವರದಿ ಸಲ್ಲಿಸಬೇಕು ಎಂದರು.

ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳ ಅರ್ಜಿ ಪರಿಶೀಲನೆ ನಡೆಸಿ ವಿಳಂಬ ಮಾಡದೇ ತಕ್ಷಣ ವಿಲೇವಾರಿ ಮಾಡಬೇಕು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧಿಕ್ಷಕ ಎಂಜಿನಿಯರ್ ಸಿದ್ದಪ್ಪ ಬಿಂಜಗೇರಿ, ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಅಭಿಷೇಕ ಚಕ್ರವರ್ತಿ, ಮದನಕುಮಾರ ನಾಗರದಿನ್ನಿ, ನಾನು ಸೋಮು ಲಮಾಣಿ, ರವಿಕಾಂತ ಬಿರಾದಾರ, ಸಿದ್ದು ರಾಯಣ್ಣರವರ, ಯಮನಪ್ಪ ಸಿದರಡ್ಡಿ, ಮಲ್ಲು ತಳವಾರ, ರಾಜಶೇಖರ ಕೂಚಬಾಳ, ಮಲ್ಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-26-1212623922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.