ವಿಜಯಪುರ: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರು ಆಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸದೃಢವಾದ ಆರೋಗ್ಯ ಹೊಂದಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಅತ್ಯಂತ ಹಿರಿದಾಗಿದೆ. ಮಕ್ಕಳು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಅನೇಕ ಸೌಲಭ್ಯ ಒದಗಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರದ ಮಟ್ಟದಲ್ಲಿ ಆಸಕ್ತಿಯುತ ಕ್ರೀಡೆಯಲ್ಲಿ ಸತತ ಪ್ರಯತ್ನ ಹಾಗೂ ಕಠಿಣ ಅಭ್ಯಾಸ ರೂಢಿಸಿಕೊಂಡು ಕ್ರೀಡಾ ಸಾಧಕರಾಗಿ, ಕ್ರೀಡಾ ಸೆಲೆಬ್ರೆಟಿಗಳಾಗಬೇಕು ಎಂದು ಹೇಳಿದರು.

ಡಾ.ಜಾವೀದ ಜಮಾದಾರ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಹೊಸ ಸಾಧನೆ ಮಾಡಿ ಮೈಲುಗಲ್ಲು ಸ್ಥಾಪಿಸುವ ಮೂಲಕ ಜಿಲ್ಲೆ, ರಾಜ್ಯದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಭಾಗಿಯಾಗಿ, ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂಬುದು ಮನವರಿಕೆ ಮಾಡಿಕೊಂಡು ಯುವಕರು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಕೊಳ್ಳುವುದರ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಪಾಲಿಕೆಯ ಮೇಯರ್ ಎಂ.ಎಸ್. ಕರಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಕ್ರೀಡಾ ಇಲಾಖೆ ಕಚೇರಿಯ ಅಧೀಕ್ಷಕ ಪ್ರಿಯಂಕಾ ಜಿ, ಟಿ.ಪಿ. ಆಲೂರು, ಸಂಗೀತಾ ಮಠಪತಿ, ದೈಹಿಕ ಶಿಕ್ಷಕರು, ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಉಪಸ್ಥಿತರಿದ್ದರು.

ಕ್ರೀಡಾ ಸೆಲೆಬ್ರೆಟಿಗಳಾಗಲು ಸಲಹೆ ಕ್ರೀಡೆಗಳಲ್ಲಿ ಭಾಗವಹಿಸಲು ಕರೆ ಕ್ರೀಡಾಕೂಟದಲ್ಲಿ ಹಲವು ತಂಡಗಳು ಭಾಗಿ

ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು
-ಸಂಗಮೇಶ ಬಬಲೇಶ್ವರ ಅಧ್ಯಕ್ಷ ಕರ್ನಾಟಕ ಬಾಲವಿಕಾಸ ಅಕಾಡೆಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.