ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 35ರ ರಾಜಕುಮಾರ ಲೇಔಟ್ನಲ್ಲಿ ನಾಯಿ ಕಡಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿಯಾಗಿ, ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸಲಹೆ ಮಾಡಿದರು.

ನಾಯಿ ಕಡಿತಕ್ಕೊಳಗಾಗಿರುವ ವಿರಾಜ್ ಸಂತೋಷ ಬಿರಾದಾರ(3) ಆರೋಗ್ಯ ಚೇತರಿಸಿಕೊಂಡಿದ್ದಾನೆ. ಪೋಷಕರು ಆತಂಕಕ್ಕೊಳಗಾಗಬೇಕಿಲ್ಲ ಎಂದರು.

ಬಾಲಕನಿಗೆ ರೇಬಿಸ್ ವಿರೋಧಿ ಲಸಿಕೆಗಳನ್ನು ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಯಿಂದಲೂ ಸೂಕ್ತ ಲಸಿಕೆಯನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಆಸ್ಪತ್ರೆಗೆ ಭೇಟಿ ನೀಡಿ ಸಮರ್ಪಕ ಸ್ಪಂದಿಸಲಾಗಿದೆ ಎಂದರು.

ಪುನರ್ ವ್ಯವಸ್ಥೆ: ರಾಜ್ ಕುಮಾರ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದ್ದು, ನಾಯಿಗಳನ್ನು ಹಿಡಿದು ಪುನರ್ ವ್ಯವಸ್ಥೆ (ಡಾಗ್ ಶೆಲ್ಟರ್) ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪಾಲಿಕೆ ಸದಸ್ಯ ರಾಜು ಕುರಿಯವರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-1746983779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.