ವಿಜಯಪುರ: 2026ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ₹7,721 ಬೆಂಬಲ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆದ ಕನಿಷ್ಠ ಬೆಂಬಲಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗಾಗಿ ಜಿಲ್ಲೆಯ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟಿ, ತಂಗಡಗಿ, ಇಂಡಿ, ಚಡಚಣ, ಹಲಸಂಗಿ,ಸಿಂದಗಿ, ಬಸವನಬಾಗೇವಾಡಿ ಸೇರಿದಂತೆ ಒಟ್ಟು 13 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ನಾಫೆಡ್ ಸಂಸ್ಥೆಗಳ ಮೂಲಕ ಖರೀದಿ ಕೇಂದ್ರಗಳಲ್ಲಿ ನೋಂದಣಿಯೊಂದಿಗೆ ಖರೀದಿ ಪ್ರಾರಂಭಿಸುವಂತೆ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಿದರು.

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್ದಿಂದ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸುವಂತೆ ಹಾಗೂ ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಯಂತೆ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ರೈತರಿಗೆ 5 ದಿನದ ಒಳಗಾಗಿ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನ ಮೌಲ್ಯವು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಸಹಕಾರ ಸಂಘಗಳ ಉಪನಿಬಂಧಕರು, ಕೆಒಎಫ್ ಜಿಲ್ಲಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಮೂರು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿ ಶಿವಾನಂದ ಗೋರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-190259881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.