ತಾಳಿಕೋಟೆ: ಪಟ್ಟಣದ ವ್ಯಾಪ್ತಿಯಲ್ಲಿಯೇ ಸರ್ಕಾರಿ ಜಮೀನಿನಲ್ಲಿ ‘ಪ್ರಜಾಸೌಧ’ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 76 ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸೋಮವಾರ ತಾತ್ಕಾಲಿಕ ವಿರಾಮ ಘೋಷಿಸಲಾಗಿದೆ. ಹೋರಾಟಗಾರರ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಪರ್ಯಾಯ ಸ್ಥಳದ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ.

ಈ ಮೊದಲು ಮೈಲೇಶ್ವರ ಬಳಿ ಪ್ರಜಾಸೌಧ ನಿರ್ಮಾಣಕ್ಕೆ ಆಡಳಿತ ಮಂಡಳಿ ಮುಂದಾಗಿತ್ತು. ಆದರೆ, ಈ ಸ್ಥಳವು ಪಟ್ಟಣದಿಂದ ಸುಮಾರು 4-5 ಕಿ.ಮೀ ದೂರವಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣ ನೀಡಿ ಸ್ಥಳೀಯರು ಹೋರಾಟ ಆರಂಭಿಸಿದ್ದರು. ಪಟ್ಟಣದ ಹೃದಯಭಾಗದಲ್ಲಿರುವ ಸರ್ಕಾರಿ ವಿಶ್ರಾಂತಿ ಭವನ, ಅಥವಾ ಹೆಸ್ಕಾಂ ಕಚೇರಿಯ ಜಾಗವನ್ನು ಪ್ರಜಾಸೌಧಕ್ಕೆ ಬಳಸಿಕೊಳ್ಳಬೇಕೆಂಬುದು ಹೋರಾಟಗಾರರ ಪ್ರಬಲ ಒತ್ತಾಯವಾಗಿತ್ತು.

ಹೋರಾಟದ ತೀವ್ರತೆ ಪರಿಗಣಿಸಿ ಜಿಲ್ಲಾಧಿಕಾರಿ ಏ. 24ರಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಪರ್ಯಾಯ ಸ್ಥಳ ನೀಡಿಕೆಯ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದಾರೆ. ಈ ಪತ್ರದ ನಕಲು ಪ್ರತಿಗಳನ್ನು ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರಿಗೆ ಹಸ್ತಾಂತರಿಸಿ, ಸತ್ಯಾಗ್ರಹ ಕೈಬಿಡುವಂತೆ ಕೋರಿದರು.

ಪತ್ರ ಸ್ವೀಕರಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಶಿನಾಥ ಮುರಾಳ, ‘ಜಿಲ್ಲಾಧಿಕಾರಿ ಸ್ಪಂದನೆಯನ್ನು ಗೌರವಿಸಿ ಸದ್ಯಕ್ಕೆ ಹೋರಾಟ ನಿಲ್ಲಿಸುತ್ತಿದ್ದೇವೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಈ ಪ್ರಸ್ತಾವ ಮಂಜೂರಾತಿ ಪಡೆಯುತ್ತೇವೆ. ಒಂದು ವೇಳೆ ಮತ್ತೆ ಮೈಲೇಶ್ವರ ಬಳಿಯೇ ಕಟ್ಟಡ ಕಟ್ಟಲು ಮುಂದಾದರೆ, ನಮ್ಮ ಹೋರಾಟ ಪುನರಾರಂಭವಾಗಲಿದೆ’ ಎಂದು ಎಚ್ಚರಿಸಿದರು.

ಡಿವೈಎಸ್ಪಿ ನಂದಗಾವಿ, ತಹಶೀಲ್ದಾರ ಡಾ. ವಿನಯಾ ಹೂಗಾರ, ಸಿಪಿಐ ಹಾಗೂ ಪಿಎಸ್ಐ ಪೊಲೀಸ್ ಸಿಬ್ಬಂದಿ ವರ್ಗದವರು ಹೋರಾಟ ಸಮಿತಿಯ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಮುತ್ತಪ್ಪ ಚಮಲಾಪುರ, ಕಾಶೀನಾಥ ಸಜ್ಜನ, ಸುರೇಶ ಹಜೇರಿ, ಮಹೇಶ ಚಲವಾದಿ ಸಂಜು ಬರದೇನಾಳ, ಪ್ರಕಾಶ ಹಜೇರಿ, ನಾಗೇಶ ಕಟ್ಟಿಮನಿ, ಮುದಕಪ್ಪ ಬಡಿಗೇರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1046835137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.