ಶುಕ್ರವಾರ, ಸೆಪ್ಟೆಂಬರ್ 24, 2021
21 °C

ವಿಜಯಪುರ, ತಾಳಿಕೋಟೆ: ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಎರಡು ವಾರಗಳಿಂದ ಮರೆಯಾಗಿದ್ದ ಮಳೆ ಗುರುವಾರ ಸಂಜೆ ಸುಮಾರು ಅರ್ಧ ತಾಸು ವಿಜಯಪುರ ನಗರ ಸೇರಿದಂತೆ ತಾಳಿಕೋಟೆ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿಯಿತು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಬಾಡತೊಡಗಿತ್ತು. ಇದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬಿಸಿಲಿನ ತಾಪ ಬೇಸಿಗೆಯನ್ನು ನೆನಪಿಸುವಂತಿತ್ತು. ಇದೀಗ ಮಳೆಯಾಗಿರುವುದರಿಂದ ರೈತರ ಆತಂಕ ದೂರವಾಗಿದೆ. ವಾತಾವರಣವೂ ತಂಪಾಗಿದೆ.

ಸುಮಾರು ಅರ್ಧ ತಾಸು ಮಳೆಯಾದ ಪರಿಣಾಮ ಚರಂಡಿಗಳು ಉಕ್ಕಿ ಮಳೆ ನೀರು ರಸ್ತೆ ಮೇಲೆ ಹರಿಯಿತು. ತಗ್ಗು ಪ್ರದೇಶ, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.

ತಿಕೋಟಾ, ನಾಲತವಾಡ ವ್ಯಾಪ್ತಿಯಲ್ಲೂ ಸಾಧಾರಣ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು