ಬಸವನಬಾಗೇವಾಡಿ: ತೆಲಗಿ ರೈಲ್ವೆ ನಿಲ್ದಾಣದಿಂದ ಬಸವನಬಾಗೇವಾಡಿ ಪಟ್ಟಣಕ್ಕೆ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೊಸ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ವತಿಯಿಂದ ಮಂಗಳವಾರ ಸಾರಿಗೆ ಸಂಸ್ಥೆಯ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಎಸ್. ಬಿರಾದಾರ ಮಾತನಾಡಿ, ‘ಹುಬ್ಬಳ್ಳಿಯಿಂದ ರಾತ್ರಿ ವೇಳೆ ತೆಲಗಿ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರು, ಮಹಿಳೆಯರು ಪಟ್ಟಣ ಸೇರಿದಂತೆ ಮುತ್ತಗಿ, ತಾಳಿಕೋಟೆ ಮತ್ತು ಮುದ್ದೇಬಿಹಾಳ ಭಾಗಗಳಿಗೆ ತೆರಳಲು ಬೆಳಗಿನ ಜಾವ ಹಾಗೂ ರಾತ್ರಿ ಯಾವುದೇ ಬಸ್ ಸೌಲಭ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ಇಡಿ ರಾತ್ರಿ ರೈಲ್ವೆ ನಿಲ್ದಾಣದಲ್ಲೇ ಕಳೆಯಬೇಕಾದ ಸ್ಥಿತಿ ಇದೆ. ಹಾಗಾಗಿ ರಾತ್ರಿ 8:30 ಕ್ಕೆ ಹಾಗೂ ಬೆಳಿಗ್ಗೆ 5:30ಕ್ಕೆ ಬಸವನಬಾಗೇವಾಡಿ ಪಟ್ಟಣದಿಂದ ತೆಲಗಿ ರೈಲ್ವೆ ನಿಲ್ದಾಣಕ್ಕೆ ಮತ್ತು ಬೆಳಿಗ್ಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1113444674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.